ಗ್ರಾಮೀಣ ಜನರಲ್ಲಿ ಧಾರ್ಮಿಕ ಶ್ರದ್ಧೆ ಇನ್ನೂ ಜೀವಂತ

ಪಂಡಿತನಹಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ ಧಾರ್ಮಿಕ ಕಾರ್ಯಕ್ರಮದಲ್ಲಿ ರಂಭಾಪುರಿ ಶ್ರೀಗಳು ಇಷ್ಟಲಿಂಗ ಮಹಾಪೂಜೆ ನೆರವೇರಿಸಿದರು.
ಪಂಡಿತನಹಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ ಧಾರ್ಮಿಕ ಕಾರ್ಯಕ್ರಮದಲ್ಲಿ ರಂಭಾಪುರಿ ಶ್ರೀಗಳು ಇಷ್ಟಲಿಂಗ ಮಹಾಪೂಜೆ ನೆರವೇರಿಸಿದರು.
Published on

ಪ್ರಮುಖ ಮುಖ್ಯಾಂಶಗಳು

  • ಪಂಡಿತನಹಳ್ಳಿ ಗ್ರಾಮ
  • ಬಾಳೆಹೊನ್ನೂರಿನ ಶ್ರೀ ಮದ್ ರಂಭಾಪುರಿ ವೀರಸಿಂಹಾಸನಾಧೀಶ್ವರ, ಶ್ರೀ 1008 ಜಗದ್ಗುರು ಪ್ರಸನ್ನ ರೇಣುಕ ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಜಗದ್ಗು
ಬೇಲೂರು: ತಾಲೂಕಿನ ಪಂಡಿತನಹಳ್ಳಿ ಗ್ರಾಮದಲ್ಲಿ ಬಾಳೆಹೊನ್ನೂರಿನ ಶ್ರೀ ಮದ್ ರಂಭಾಪುರಿ ವೀರಸಿಂಹಾಸನಾಧೀಶ್ವರ, ಶ್ರೀ 1008 ಜಗದ್ಗುರು ಪ್ರಸನ್ನ ರೇಣುಕ ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಜಗದ್ಗುರುಗಳಿಂದ ಇಷ್ಟಲಿಂಗ ಮಹಾಪೂಜೆ ನೂರಾರು ಭಕ್ತರ ಸಮ್ಮುಖದಲ್ಲಿ ಗುರುವಾರ ವೈಭವದಿಂದ ನೆರವೇರಿತು.
ಪಂಡಿತನಹಳ್ಳಿ ಗ್ರಾಮಕ್ಕೆ ಆಗಮಿಸಿದ ಶ್ರೀಗಳನ್ನು ಭಕ್ತರು ಪೂರ್ಣಕುಂಭದೊಂದಿಗೆ ಬರಮಾಡಿಕೊಂಡರು. ನಂತರ ಆಯೋಜಿಸಿದ್ದ ಧಾರ್ಮಿಕ ಕಾರ್ಯಕ್ರಮದಲ್ಲಿ ಜಗದ್ಗುರುಗಳು ಲೋಕ ಕಲ್ಯಾಣಾರ್ಥವಾಗಿ ಇಷ್ಟಲಿಂಗ ಮಹಾಪೂಜೆ ನೆರವೇರಿಸಿದರು.
ಧಾರ್ಮಿಕ ಸಭೆ ಹಾಗೂ ಜನಜಾಗೃತಿ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ಶ್ರೀಪ್ರಸನ್ನ ರೇಣುಕ ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ, ಧರ್ಮದಿಂದ ಮಾತ್ರ ಮಾನವ ಕಲ್ಯಾಣ ಸಾಧ್ಯ. ಧರ್ಮ ಎನ್ನುವುದು ಕೇವಲ ಆಚರಣೆಯಲ್ಲ. ಅದು ಬದುಕುವ ದಾರಿ. ಮಾನವ ಧರ್ಮ ದೊಡ್ಡದಾಗಬೇಕು. ಪ್ರಸ್ತುತ ದಿನಗಳಲ್ಲಿ ಭೌತಿಕ ಸುಖಕ್ಕೆ ಪ್ರಾಮುಖ್ಯತೆ ನೀಡುತ್ತಿರುವ ಮನುಷ್ಯ, ಆಂತರಿಕ ಶಾಂತಿಯನ್ನು ಮರೆಯುತ್ತಿದ್ದಾನೆ ಎಂದರು.
ಸದಾಚಾರ ಹಾಗೂ ಗುರು, ಹಿರಿಯರ ಮೇಲಿನ ಗೌರವ ಸಮಾಜವನ್ನು ಸದೃಢವಾಗಿಡಲು ಸಹಕಾರಿಯಾಗಿದೆ. ಗ್ರಾಮೀಣ ಭಾಗದ ಜನರಲ್ಲಿ ಇಂದಿಗೂ ಧಾರ್ಮಿಕ ಶ್ರದ್ಧೆ ಮತ್ತು ಭಕ್ತಿ ಜೀವಂತವಾಗಿದೆ. ಪಂಡಿತನಹಳ್ಳಿ ಗ್ರಾಮದ ಭಕ್ತರ ಭಕ್ತಿ ಹಾಗೂ ಸಂಸ್ಕಾರ ಇತರರಿಗೆ ಮಾದರಿಯಾಗಿದೆ. ಆಧುನಿಕತೆಯ ಭರಾಟೆಯಲ್ಲಿ ಮನುಷ್ಯ ನೆಮ್ಮದಿ ಕಳೆದುಕೊಳ್ಳುತ್ತಿದ್ದು, ಸಮಾಜದಲ್ಲಿ ಶಾಂತಿ, ನೆಮ್ಮದಿ ಮತ್ತು ಸೌಹಾರ್ದತೆ ನೆಲೆಸಬೇಕಾದರೆ ಧಾರ್ಮಿಕ ಮತ್ತು ಆಧ್ಯಾತ್ಮಿಕ ಚಿಂತನೆಗಳು ಅತ್ಯಗತ್ಯ ಎಂದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net