ಕೊರಟಗೆರೆ pooje ತಾಲೂಕಿನ ಹೊಸಕೋಟೆ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಧಾರ್ಮಿಕ ಕಾರ್ಯಕ್ರಮದಲ್ಲಿ ಕುಂಚಿಟಿಗ ಮಹಾಸಂಸ್ಥಾನ ಮಠದ ಪೀಠಾಧ್ಯ ಶ್ರೀ ಡಾ.ಹನುಮಂತನಾಥ ಸ್ವಾಮೀಜಿ, ಮುಖಂಡರಾದ ರಾಮಸ್ವಾಮಿ, ಜವರೇಗೌಡ, ಲಿಂಗರಾಜು, ದೇವಾಲಯ ಸಮಿತಿ ಸದಸ್ಯರು ಇದ್ದರು.
Published on:
Copied
Follow Us
ಕೊರಟಗೆರೆ:
ಧಾರ್ಮಿಕ ಆಚರಣೆ ಮತ್ತು ಸಂಪ್ರದಾಯಗಳು ಧರ್ಮದ ಜೀವಂತಿಕೆಗೆ ಸಾಯಾಗಿದ್ದು, ಇವುಗಳನ್ನು ಮುಂದಿನ ಪೀಳಿಗೆಗೂ ಉಳಿಸಿ ಬೆಳೆಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದು ಎಲೆರಾಂಪುರ ಕುಂಚಿಟಿಗ ಮಹಾ ಸಂಸ್ಥಾನ ಮಠದ ಪೀಠಾಧ್ಯ ಶ್ರೀ ಡಾ.ಹನುಮಂತನಾಥ ಸ್ವಾಮೀಜಿ ಹೇಳಿದರು.
pooje
ತಾಲೂಕಿನ ಕೋಳಾಲ ಹೋಬಳಿಯ ಹೊಸಕೋಟೆ ಗ್ರಾಮದಲ್ಲಿರುವ ಏಳು ಮಂದಮ್ಮ ದೇವಾಲಯದಲ್ಲಿ ಅಮಾವಾಸ್ಯೆ ಪ್ರಯುಕ್ತ ಬುಧವಾರ ಹಮ್ಮಿಕೊಂಡಿದ್ದ ಧಾರ್ಮಿಕ ಕಾರ್ಯಕ್ರಮದಲ್ಲಿ ಸಾನ್ನಿಧ್ಯ ವಹಿಸಿ ಮಾತನಾಡಿ,
ದೇಶವು ಇಡೀ ವಿಶ್ವದಲ್ಲಿಯೇ ವಿಶಿಷ್ಟ ಸಂಸತಿ, ಪರಂಪರೆ ಮತ್ತು ಧಾರ್ಮಿಕ ಆಚರಣೆಗಳನ್ನು ಉಳಿಸಿಕೊಂಡಿರುವ ಹೆಗ್ಗಳಿಕೆಗೆ ಪಾತ್ರವಾಗಿದೆ. ದೇಶದಲ್ಲಿ ನಡೆಯುವ ಪ್ರತಿಯೊಂದು ಧಾರ್ಮಿಕ ಆಚರಣೆ ಹಿಂದೆಯೂ ಆಧ್ಯಾತ್ಮಿಕತೆ, ನಂಬಿಕೆ, ಸಂಸತಿ ಹಾಗೂ ಧರ್ಮದ ವಿಶೇಷತೆ ಅಡಗಿವೆ ಎಂದು ಹೇಳಿದರು.
ಪ್ರತಿಯೊಂದು ಗ್ರಾಮದಲ್ಲಿಯೂ ತನ್ನದೇ ಆದ ವಿಶಿಷ್ಟ ದೈವಿಕ ಆಚರಣೆ ಮತ್ತು ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿವೆ. ಜನರಲ್ಲಿ ಭಕ್ತಿ, ನಂಬಿಕೆ ಹಾಗೂ ಸಾಮಾಜಿಕ ಒಗ್ಗಟ್ಟನ್ನು ಬೆಳೆಸುವುದರ ಜತೆಗೆ ಸಂಸತಿಯ ಶ್ರೀಮಂತಿಕೆಯನ್ನು ಪ್ರತಿಬಿಂಬಿಸುತ್ತವೆ. ಇದೇ ನಮ್ಮ ದೇಶದ ವಿಶೇಷ ಶಕ್ತಿ ಎಂದು ಸ್ವಾಮೀಜಿ ಹೇಳಿದರು.
ಅಮಾವಾಸ್ಯೆ ಹಿನ್ನೆಲೆ ದೇವಾಲಯದಲ್ಲಿ ವಿಶೇಷ ಪೂಜೆ, ಹೋಮ, ಹವನ ಸೇರಿ ವಿವಿಧ ಪೂಜೆ ಕಾರ್ಯಕ್ರಮ ನೆರವೇರಿಸಲಾಯಿತು.