ರ: ತಾಲೂಕಿನ ಕಣಕಟ್ಟೆ ಹೋಬಳಿಯ ಮಾಡಾಳು ಗ್ರಾಮದ ಮೂಲಸ್ಥಾನ ಶ್ರೀ ಸ್ವರ್ಣಗೌರಿ ದೇವಾಲಯ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಶಿಲಾ ದೇವಾಲಯದ ಕಳಸಾರೋಹಣ ಹಾಗೂ ಧಾರ್ಮಿಕ ಕಾರ್ಯಕ್ರಮ ಆ.16, 17ರಂದು ಆಯೋಜಿಸಲಾಗಿದೆ.
ಕೋಡಿಮಠದ ಜಗದ್ಗುರು ಡಾ. ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರ ದಿವ್ಯ ಸಾನ್ನಿಧ್ಯದಲ್ಲಿ ಕಾರ್ಯಕ್ರಮ ನೆರವೇರಲಿದೆ. ಕೋಡಿಮಠದ ಉತ್ತರಾಧಿಕಾರಿ ಚೇತನ್ ಮರಿದೇವರು ಹಾಗೂ ಗ್ರಾಮದ ಆರಾಧ್ಯ ದೈವ ಶ್ರೀ ಗುರು ಚನ್ನಬಸವೇಶ್ವರ ಸ್ವಾಮಿ ಸಮ್ಮುಖದಲ್ಲಿ ಧಾರ್ಮಿಕ ಕೈಂಕರ್ಯ ನೆರವೇರಲಿವೆ.
ಆ.16ರಂದು ಸಂಜೆ 4 ಗಂಟೆಗೆ ಮೂಲ ಸನ್ನಿಧಿಯಿಂದ ಮುತ್ತೈದೆಯರು ಗಂಗಾ ಪೂಜೆಯೊಂದಿಗೆ ಗ್ರಾಮದ ಹೊರ ಭಾಗದಲ್ಲಿರುವ ಗುರು ಚನ್ನಬಸವೇಶ್ವರ ಸ್ವಾಮಿ ದೇವಾಲಯಕ್ಕೆ ತೆರಳುವರು ಎಂದು ಕೋಡಿಮಠ ಮಹಾಸಂಸ್ಥಾನ ಹಾಗೂ ಮೂಲಸ್ಥಾನ ಶ್ರೀಸ್ವರ್ಣ ಗೌರಮ್ಮ ದೇವಿ ಸೇವಾ ಸಮಿತಿ ತಿಳಿಸಿದೆ.