ಕಾನೂನು ಬಾಹಿರ ಕಟ್ಟಡ ತೆರವುಗೊಳಿಸಿ

ಹುನಗುಂದ ತಾಲೂಕಿನ ತಹಸೀಲ್ದಾರ್ ಕಚೇರಿ ಎದುರು ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಆಶೋಕ ಪೂಜಾರ, ಹುಸೇನ್ ಸಂದಿಮನಿ, ಪ್ರವೀಣ ವಾಲಿಕಾರ ಇತರರಿದ್ದರು.
ಹುನಗುಂದ ತಾಲೂಕಿನ ತಹಸೀಲ್ದಾರ್ ಕಚೇರಿ ಎದುರು ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಆಶೋಕ ಪೂಜಾರ, ಹುಸೇನ್ ಸಂದಿಮನಿ, ಪ್ರವೀಣ ವಾಲಿಕಾರ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಕರವೇ ಕಾರ್ಯಕರ್ತರಿಂದ ಪ್ರತಿಭಟನೆ
  • ತಹಸೀಲ್ದಾರ್‌ಗೆ ಮನವಿ
ಹುನಗುಂದ: ತಾಲೂಕಿನ ಅಮೀನಗಡ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾನೂನು ಬಾಹಿರ ನಿರ್ಮಿಸಲಾಗಿರುವ ಕಟ್ಟಡವನ್ನು ಕೂಡಲೇ ತೆರವುಗೊಳಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡರ ಬಣ) ತಾಲೂಕು ಘಟಕದ ಪದಾಧಿಕಾರಿಗಳು ತಹಸೀಲ್ದಾರ್ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿದರು. 
ಕರವೇ ಜಿಲ್ಲಾ ಅಧ್ಯಕ್ಷ ರಂಜಾನ್ ನದಾಫ್ ಮಾತನಾಡಿ, ಅಮೀನಗಡ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಪ್ರಮುಖ ರಸ್ತೆಯಲ್ಲಿ ಸರ್ಕಾರಿ ಜಾಗ ಹಾಗೂ ಸಾರ್ವಜನಿಕರ ಸಂಚಾರಕ್ಕೆ ಅಡ್ಡಿಯಾಗುವ ರೀತಿಯಲ್ಲಿ ಅನಧಿಕೃತ ಕಟ್ಟಡ ಮತ್ತು ಒತ್ತುವರಿಗಳು ಹೆಚ್ಚಾಗುತ್ತಿವೆ. ಹೀಗಾಗಿ ನಗರ ಪಟ್ಟಣದಲ್ಲಿ ನಿಯಮ ಬಾಹಿರವಾಗಿ ನಿರ್ಮಿಸಿರುವ ಕಟ್ಟಡ  ತೆರವುಗೊಳಿಸಬೇಕು. 
ಸಂಚಾರ ಹಾಗೂ ಪಾದಚಾರಿಗಳಿಗೂ ಸಂಕಷ್ಟ ಎದುರಾಗುತ್ತಿದೆ. ಸಾರ್ವಜನಿಕರ ಹಿತದೃಷ್ಟಿಯಿಂದ ಅಕ್ರಮ ಕಟ್ಟಡಗಳನ್ನು ತೆರವುಗೊಳಿಸುವಂತೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಅಧಿಕಾರಿಗಳು ಯಾವುದೇ ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ತಾಲೂಕು ಘಟಕದ ಅಧ್ಯಕ್ಷ ರೋಹಿತ್ ಬಾರಕೇರ ಮಾತನಾಡಿ, ಅಕ್ರಮ ಕಟ್ಟಡ ನಿರ್ಮಾಣಕ್ಕೆ ಅಧಿಕಾರಿಗಳು ಸಾಥ್ ನೀಡಿ ಸರ್ಕಾರಿ ಜಾಗೆಯನ್ನು ಪರಭಾರೆ ಮಾಡಿದ ದಾಖಲೆಗಳು ಸಾಕಷ್ಟಿವೆ. ಆದರೆ ಕೆಲವರ ಒತ್ತಡಕ್ಕೆ ಮಣಿದು ಆಕ್ರಮ ಕಟ್ಟಡಗಳ ವಿರುದ್ಧ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಮುಖಂಡರಾದ ಆಶೋಕ ಪೂಜಾರ, ಹುಸೇನ್ ಸಂದಿಮನಿ, ಪ್ರವೀಣ ವಾಲಿಕಾರ, ಜಹೀರ ಸಂಗಮಕರ, ನಾಗರಾಜ ರಾಠೋಡ, ಮಹ್ಮದ್ ನಹಿರೇಮಠ, ಬಸವರಾಜ ತಿಮ್ಮಾಪುರ, ಮುತ್ತಣ್ಣ ಕಲಮಡಿ, ಶೋಭಾ ಅರಿಕೆ, ಸವಿತಾ ಹಿರೇಮಠ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net