ವಿಧಾನಸಭೆ ಅಧಿವೇಶನದಲ್ಲಿ ವಿಷಯ ಪ್ರಸ್ತಾಪಿಸಿದ ಚವ್ಹಾಣ್, ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಹಳೆಯ ಹಾಗೂ ಶಿಥಿಲಗೊಂಡಿರುವ ವಿದ್ಯುತ್ ಕಂಬ ಮತ್ತು ತಂತಿಗಳಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು, ಮಳೆ-ಗಾಳಿ ಸಂದರ್ಭದಲ್ಲಿ ಅಪಾಯದ ಸ್ಥಿತಿ ನಿರ್ಮಾಣವಾಗುತ್ತಿದೆ. ಹೀಗಾಗಿ ಹಳೆಯ ವಿದ್ಯುತ್ ಮೂಲಸೌಕರ್ಯಗಳನ್ನು ಹಂತ ಹಂತವಾಗಿ ಬದಲಿಸಿ ಸುರಕ್ಷತ ಮತ್ತು ಗುಣಮಟ್ಟದ ವಿದ್ಯುತ್ ವ್ಯವಸ್ಥೆ ಕಲ್ಪಿಸುವ ಅಗತ್ಯವನ್ನು ಸರ್ಕಾರದ ಗಮನಕ್ಕೆ ತಂದಿದ್ದಾರೆ.