ಭುವನೇಶ್ವರಿ ಮೂರ್ತಿ ಪ್ರತಿಷ್ಠಾಪಿಸಲು ಮನವಿ

ಭುವನೇಶ್ವರಿ ಮೂರ್ತಿ
ಭುವನೇಶ್ವರಿ ಮೂರ್ತಿ
Published on
ಬೆಳಗಾವಿ: ಸುವರ್ಣ ವಿಧಾನಸೌಧದ ಮುಖ್ಯ ದ್ವಾರದ ಮುಂದೆ ಕನ್ನಡಿಗರ ಸ್ವಾಭಿಮಾನದ ಸಂಕೇತವಾಗಿ ಭುವನೇಶ್ವರಿ ದೇವಿಯ 108 ಅಡಿ ಎತ್ತರದ ಕಂಚಿನ ಪ್ರತಿಮೆ ಪ್ರತಿಷ್ಠಾಪಿಸಬೇಕು ಎಂದು ಸರ್ವೋದಯ ಸ್ವಯಂ ಸೇವಾ ಸಂಘ ಗುರುವಾರ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದೆ.
ಕರ್ನಾಟಕ ನಾಮಕರಣದ ಸುವರ್ಣ ಮಹೋತ್ಸವ ಸವಿನೆನಪಿಗಾಗಿ ಸುವರ್ಣ ಸೌಧ ಎದುರಿನಲ್ಲಿ ಭುವೇಶ್ವರಿ ದೇವಿ ಮೂರ್ತಿ ಪ್ರತಿಷ್ಠಾಪಿಸುವುದು ಸ್ತುತ್ಯಾರ್ಹವಾಗಿದೆ. ಸೌಧವು ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ದೂರದಿಂದಲೂ ಕಾಣುವಂತಹ ಎತ್ತರದ ಸ್ಥಳದಲ್ಲಿದೆ.
ನಿತ್ಯ ಸಾವಿರಾರು ಜನ ಈ ಮಾರ್ಗದಲ್ಲಿ ಪ್ರಯಾಣಿಸುತ್ತಾರೆ. ಹೀಗಾಗಿ, ಇಲ್ಲಿ ಬೃಹತ್ ಪ್ರತಿಮೆ ಸ್ಥಾಪಿಸುವುದು ಕರ್ನಾಟಕಕ್ಕೆ ಹೆಮ್ಮೆಯ ಧ್ಯೋತಕವಾಗಲಿದೆ ಎಂದು ಸಂಘದ ಅಧ್ಯಕ್ಷ ಶ್ರೀನಿವಾಸ ತಾಳೂಕರ ಮತ್ತು ಇತರರು ಮನವಿಯಲ್ಲಿ ಆಗ್ರಹಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net