ಸರ್ಕಾರಿ ಶಾಲೆಯಲ್ಲಿ ಓದಿದ್ರೆ ಉದ್ಯೋಗದಲ್ಲಿ ಮೀಸಲು govt school

ಸರ್ಕಾರಿ ಶಾಲೆಯಲ್ಲಿ ಓದಿದ್ರೆ ಉದ್ಯೋಗದಲ್ಲಿ ಮೀಸಲು govt school
ಸರ್ಕಾರಿ ಶಾಲೆಯಲ್ಲಿ ಓದಿದ್ರೆ ಉದ್ಯೋಗದಲ್ಲಿ ಮೀಸಲು govt school
Published on
ನರಸಾಪುರ: ಈಗ ಮಕ್ಕಳನ್ನು ಸರ್ಕಾರಿ ಶಾಲೆಗಳಲ್ಲಿ ಓದಿಸಿದರೆ ಮುಂದಿನ ದಿನಗಳಲ್ಲಿ ದೊಡ್ಡವರಾದ ನಂತರ ಉದ್ಯೋಗದಲ್ಲಿ ಮೀಸಲಾತಿ ಸಿಗುತ್ತದೆ. ಆದ್ದರಿಂದ ಪಾಲಕರು ಮಕ್ಕಳನ್ನು ಕಡ್ಡಾಯವಾಗಿ ಸರ್ಕಾರಿ ಶಾಲೆಗೆ ದಾಖಲಿಸಬೇಕು ಎಂದು ಶಾಸಕ ಕೊತ್ತೂರು ಮಂಜುನಾಥ್​ ಹೇಳಿದರು.govt school
ತಾಲೂಕಿನ ನರಸಾಪುರದಲ್ಲಿ ಸೋಮವಾರ ಕರ್ನಾಟಕ ಪಬ್ಲಿಕ್​ ಶಾಲೆಯ (ಕೆಪಿಎಸ್​) 2026&27 ನೇ ಸಾಲಿನ ಶಾಲಾ ಪ್ರಾರಂಭೋತ್ಸವದಲ್ಲಿ ಮಾತನಾಡಿ, ಖಾಸಗಿ ಶಾಲೆಗಳಲ್ಲಿ ಕೇವಲ ಸುಂದರ ಕೊಠಡಿಗಳಿರಬಹುದು. ಖಾಸಗಿಯಲ್ಲಿ ಓದಿದವರಿಗೆ ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿ ಸಿಗುವುದಿಲ್ಲ. ಪ್ರತಿದಿನ ನನ್ನ ಕಚೇರಿಗೆ ನೂರಾರು ಪಾಲಕರು ಖಾಸಗಿ ಶಾಲೆಯ ಶುಲ್ಕ ಕಟ್ಟಲಾಗದೆ ನೆರವಿಗಾಗಿ ಬರುತ್ತಾರೆ. ಸರ್ಕಾರದಿಂದ ಬರುವ ನನ್ನ ಸಂಬಳ ಹಾಗೂ ಗೌರವಧನದ ಒಂದು ರೂಪಾಯಿಯನ್ನೂ ನಾನು ಮನೆಗೆ ತಗೆದುಕೊಂಡು ಹೋಗದೆ, ಬಡಮಕ್ಕಳ ಶುಲ್ಕ ಹಾಗೂ ಆಸ್ಪತ್ರೆ ಖರ್ಚಿಗಾಗಿಯೇ ಚೆಕ್​ ಮೂಲಕ ನೀಡುತ್ತಿದ್ದೆನೆ. ಪಾಲಕರು ಖಾಸಗಿ ಶಾಲೆಯ ಭಾರ ಹೊರುವ ಬದಲು ಸರ್ಕಾರಿ ಶಾಲೆಗಳ ಸೌಲಭ್ಯ ಸದ್ಬಳಸಿಕೊಳ್ಳಬೇಕು ಎಂದು ಮನವಿ ಮಾಡಿದರು.
ವಿದ್ಯಾಭ್ಯಾಸ ಹಾಗೂ ದೇವಸ್ಥಾನಗಳ ಅಭಿವೃದ್ಧಿಗೆ ದಾನಿಗಳು ಸದಾ ಹಗಲಿರಳು ಶ್ರಮಿಸುತ್ತಾರೆ. ಸರ್ಕಾರಿ ಶಾಲೆಯ ಮಕ್ಕಳು ತಾವೇನೂ ಖಾಸಗಿ ಶಾಲೆಗಿಂತ ಕಮ್ಮಿ ಇಲ್ಲ ಎನ್ನುವ ಆತ್ಮವಿಶ್ವಾಸದಿಂದ ಓದಬೇಕು ಎಂಬ ಒಂದೇ ಉದ್ದೇಶದಿಂದ ತಮ್ಮ ಸ್ವಂತ ಖರ್ಚಿನಲ್ಲಿ ಇಡೀ ಶಾಲೆಗೆ ಸತ್ಯನಾರಾಯಣ ಜ್ಯೂವೆರ್ಲಸ್​ ಮಾಲೀಕ ವೆಂಕಟೇಶ್​ ಬಣ್ಣ ಬಳಿಸಿಕೊಟ್ಟಿದ್ದಾರೆ. ಅವರ ಈ ಜನಪರ ಸೇವೆಗೆ ೇತ್ರದ ಜನತೆಯ ಪರವಾಗಿ ಧನ್ಯವಾದ ಸಲ್ಲಿಸುತ್ತೇನೆ ಎಂದರು.
ನರಸಾಪುರ ಶಾಲೆಯ ಕೊಠಡಿಗಳ ಕೊರತೆ, ಕಾಂಪೌಂಡ್​ ಹಾಗೂ ಆಟದ ಮೈದಾನದ ಅಭಿವೃದ್ಧಿ ಕುರಿತು ಗ್ರಾಮಸ್ಥರು ಶಾಸಕರ ಗಮನಕ್ಕೆ ತಂದರು. ಇದಕ್ಕೆ ತಕ್ಷಣವೇ ಸ್ಪಂದಿಸಿದ ಕೊತ್ತೂರು ಮಂಜುನಾಥ್​ ಅವರು, ನಮ್ಮ ಭಾಗದಲ್ಲಿ ಸಾಕಷ್ಟು ಕೈಗಾರಿಕೆಗಳಿದ್ದು, ಸಿಎಸ್​ಆರ್​ ನಿಧಿ ಲಭ್ಯವಿದೆ. ನಾನು ಖುದ್ದಾಗಿ ಉದ್ಯಮಿಗಳೊಂದಿಗೆ ಮಾತನಾಡಿ ಶ್ರೀದಲ್ಲೆ ಶಾಲೆಗೆ ಅಗತ್ಯವಿರುವ ಹೆಚ್ಚುವರಿ ಕೊಠಡಿ ಹಾಗೂ ಮೈದಾನದ ಕಾಮಗಾರಿಯನ್ನು ಮಾಡಿಸಿಕೊಡುತ್ತೇನೆ ಎಂದು ಭರವಸೆ ನೀಡಿದರು.
ಸರ್ಕಾರಿ ಶಾಲೆಯಲ್ಲಿ ಓದುವ ಮಕ್ಕಳೇ ನಾಳಿನ ದೇಶದ ಭವಿಷ್ಯ, ರಾಜಕೀಯವಾಗಿ ನಮ್ಮ ಕೋಲಾರದ ಹೆಮ್ಮೆಯ ನಾಯಕರಾದ ಕೆ.ಸಿ. ರೆಡ್ಡಿ, ಬೈರೇಗೌಡರು, ಶ್ರೀನಿವಾಸಗೌಡರು, ಟಿ. ಚನ್ನಯ್ಯ ಹಾಗೂ ಲತೀಫ್​ ಸಾಬ್​ ಅವರಂತಹ ಮುತ್ಸದ್ದಿ ನಾಯಕರು ಈ ಶಾಲೆಗಳಿಂದಲೇ ಶಿಕ್ಷಣ ಪಡೆದರು ಎಂದು ತಿಳಿಸಿದರು.
ಎಂಎಲ್ಸಿ ಎಂ.ಎಲ್​ ಅನಿಲ್​ ಕುಮಾರ್​ ಮಾತನಾಡಿ, ಕೋಲಾರದ ಶಾಸಕರು ಇವತ್ತಿನ ರಾಜಕೀಯದ ಸಂದರ್ಭದಲ್ಲಿ ಬೇರೆ ಶಾಸಕರಂತೆ ದೆಹಲಿಗೆ ಹೋಗಿ ಮಂತ್ರಿಗೆ ಲಾಬಿ ಮಾಡಲಿಲ್ಲ. ಸರ್ಕಾರಿ ಶಾಲೆಗಳ ಬಗ್ಗೆ ಇರುವ ಕಾಳಜಿಗೆ ಬಂದಿದ್ದಾರೆ. ಶಿಕ್ಷಣದ ಗುಣಮಟ್ಟ ಸುಧಾರಿಸಲು ಕೆಪಿಎಸ್​ ಶಾಲೆಗಳು ಸಹಕಾರಿಯಾಗಲಿವೆ. ಈಗಾಗಲೇ ಕೋಲಾರ ೇತ್ರದಲ್ಲಿ ಐದು ಶಾಲೆ ಮಾತ್ರ ಇದ್ದು ಮುಂದೆ ಇನ್ನೂ ಅವಶ್ಯಕತೆ ಇರುವ ಕಡೆ ಶಾಲೆ ಮಂಜೂರು ಮಾಡಲಾಗುತ್ತದೆ ಪೋಷಕರು ಖಾಸಗಿ ಶಾಲೆಗಳ ಇಂಗ್ಲಿಷ್​ ವ್ಯಾಮೋಹ ಬಿಟ್ಟು ಸರ್ಕಾರಿ ಶಾಲೆಯ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಿ ಎಂದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net