ಎಸ್‌ಐಆರ್ ದ್ವಂದ್ವ ಆದೇಶ ಇತ್ಯರ್ಥಪಡಿಸಿ: ಖಾಸಗಿ ಶಾಲೆಗಳ ಒತ್ತಾಯ

ವಿಶೇಷ ಸಮಗ್ರ ಪರಿಷ್ಕರಣೆ
ವಿಶೇಷ ಸಮಗ್ರ ಪರಿಷ್ಕರಣೆ
Published on

ಪ್ರಮುಖ ಮುಖ್ಯಾಂಶಗಳು

  • ಬಿಇಒಗಳು ಹಾಗೂ ಚುನಾವಣಾ ಅಧಿಕಾರಿಗಳು ಎಸ್‌ಐಆರ್ ಕಾರ್ಯಕ್ಕಾಗಿ ಶಿಕ್ಷಕರನ್ನು ಕಳುಹಿಸಬೇಕು. ಒಂದು ವೇಳೆ ಕಳುಹಿಸದಿದ್ದರೆ, ಎಫ್ಐಆರ್ ದಾಖಲಿಸಿ ಕಾನೂನು ಕ್ರಮ ಜರುಗಿಸುವುದಾಗಿ ಎಚ್ಚರಿಕೆ
  • ಶಿಕ್ಷಣ ಇಲಾಖೆ ಅಧಿಕಾರಿಗಳು ನಿಯಮಿತ ತರಗತಿಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸಬಾರದು. ಶಿಕ್ಷಕರ ಕೊರತೆಯಿಂದ ತರಗತಿಗಳು ನಡೆಯದಿದ್ದರೆ, ಶಾಲೆಗಳ ವಿರುದ್ಧ ಶಿಸ್ತು ಕ್ರಮ
  • ಒಂದು ಆದೇಶವನ್ನು ಪಾಲಿಸಿದರೆ, ಮತ್ತೊಂದು ಆದೇಶದ ಉಲ್ಲಂಘನೆಯಾಗಲಿದೆ. ಆದ್ದರಿಂದ ಎರಡೂ ಇಲಾಖೆಗಳ ಅಧಿಕಾರಿಗಳು ಸಭೆ ನಡೆಸಿ ಜಂಟಿಯಾಗಿ ಸ್ಪಷ್ಟ ಆದೇಶ ಹೊರಡಿಸಬೇಕು.
ಬೆಂಗಳೂರು: ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯಕ್ಕೆ ಶಿಕ್ಷಕರು ಕಡ್ಡಾಯವಾಗಿ ಹಾಜರಾಗಬೇಕು ಎಂಬ ಚುನಾವಣಾ ಆಯೋಗದ ಆದೇಶ ಹಾಗೂ ಶಾಲೆಗಳಲ್ಲಿ ಯಾವುದೇ ಕಾರಣಕ್ಕೂ ತರಗತಿಗಳನ್ನು ತಪ್ಪದೇ ನಡೆಸಬೇಕೆಂಬ ಶಿಕ್ಷಣ ಇಲಾಖೆಯ ಆದೇಶಕ್ಕೆ ಸಿಲುಕಿ ಸಂಕಷ್ಟ ಅನುಭವಿಸುವಂತಾಗಿದೆ ಎಂದು ಖಾಸಗಿ ಶಾಲೆಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿವೆ.
ಎರಡೂ ಇಲಾಖೆಗಳ ದ್ವಂದ್ವ ನೀತಿಯನ್ನು ಬಗೆಹರಿಸುವಂತೆ ಕೋರಿ ಖಾಸಗಿ ಶಾಲಾ ಆಡಳಿತ ಮಂಡಳಿಗಳ (ಕ್ಯಾಮ್ಸ್) ಪ್ರಧಾನ ಕಾರ್ಯದರ್ಶಿ ಡಿ. ಶಶಿಕುಮಾರ್ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.
ಇತ್ತೀಚೆಗೆ ಬಿಇಒಗಳು ಹಾಗೂ ಚುನಾವಣಾ ಅಧಿಕಾರಿಗಳು ಎಸ್‌ಐಆರ್ ಕಾರ್ಯಕ್ಕಾಗಿ ಶಿಕ್ಷಕರನ್ನು ಕಳುಹಿಸಬೇಕು. ಒಂದು ವೇಳೆ ಕಳುಹಿಸದಿದ್ದರೆ, ಎಫ್ಐಆರ್ ದಾಖಲಿಸಿ ಕಾನೂನು ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಮತ್ತೊಂದು ಕಡೆ ಶಿಕ್ಷಣ ಇಲಾಖೆ ಅಧಿಕಾರಿಗಳು ನಿಯಮಿತ ತರಗತಿಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸಬಾರದು. ಶಿಕ್ಷಕರ ಕೊರತೆಯಿಂದ ತರಗತಿಗಳು ನಡೆಯದಿದ್ದರೆ, ಶಾಲೆಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಪರಿಸ್ಥಿತಿಯೂ ಇದೆ. ಇದರಲ್ಲಿ ಯಾವುದನ್ನು ಪಾಲಿಸಬೇಕು ಎಂದು ಪ್ರಶ್ನಿಸಿದ್ದಾರೆ.
ಒಂದು ಆದೇಶವನ್ನು ಪಾಲಿಸಿದರೆ, ಮತ್ತೊಂದು ಆದೇಶದ ಉಲ್ಲಂಘನೆಯಾಗಲಿದೆ. ಆದ್ದರಿಂದ ಎರಡೂ ಇಲಾಖೆಗಳ ಅಧಿಕಾರಿಗಳು ಸಭೆ ನಡೆಸಿ ಜಂಟಿಯಾಗಿ ಸ್ಪಷ್ಟ ಆದೇಶ ಹೊರಡಿಸಬೇಕು. ಶಾಲೆಗಳು ಮತ್ತು ಶಿಕ್ಷಕರ ವಿರುದ್ಧ ಯಾವುದೇ ಕ್ರಮವಾಗದಂತೆ ನಿರ್ದೇಶನ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net