ಮುದಗಲ್: ಮುಖ್ಯಮಂತ್ರಿಯಾಗಿ ಲೋಕಭವನದಲ್ಲಿ ಡಿ.ಕೆ.ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಪಟ್ಟಣದಲ್ಲಿ ಕಾಂಗ್ರೆಸ್ ಪ್ರಚಾರ ಸಮಿತಿ, ಕಾಂಗ್ರೆಸ್ ಬ್ಲಾಕ್, ಕಾಂಗ್ರೆಸ್ ಯುವ ಬ್ರಿಗೇಡ್ ವತಿಯಿಂದ ಪಟಾಕಿ ಸಿಡಿಸಿ ಬುಧವಾರ ಸಂಜೆ ಸಂಭ್ರಮಾಚರಣೆ ಆಚರಿಸಲಾಯಿತು.
ರಾಹುಲ್ ಗಾಂಧಿ ಯುವ ಬ್ರಿಗೇಡ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್.ಆರ್.ರಸೂಲ್ ಮಾತನಾಡಿ, ಪಕ್ಷದ ನಿಷ್ಠೆಗೆ ಡಿಕೆಶಿ ಅವರಿಗೆ ಸಿಎಂ ಸ್ಥಾನ ಸಂದ ಗೌರವ ಎಂದರು.
ತಳಮಟ್ಟದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಲು ಹಗಲಿರುಳು ಶ್ರಮಿಸಿದ್ದು, ಉತ್ತಮ ಆಡಳಿತ ಮೂಲಕ ಮುಂದಿನ ದಿನಗಳಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಅಧಿಕಾರಕ್ಕೆ ಏರಲು ಆಡಳಿತ ದಿಕ್ಸೂಚಿಯಾಗಲಿದೆ ಎಂದರು.