ಸಭೆಗೂ ಮುಂಚೆ ಮುತ್ತಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಡಿ ತಾಂಡಾಕ್ಕೆ ತೆರಳಿದ ಜಿಪಂ ಸಿಇಒ ಡಾ.ಗಿರೀಶ ಬದೋಲೆ, ಸಾರ್ವಜನಿಕರಿಗೆ ಟ್ಯಾಂಕರ್ ನೀರು ಸರಬರಾಜು ಮಾಡುತ್ತಿರುವುದನ್ನು ವೀಕ್ಷಿಸಿ ಹೊಸದಾಗಿ ಕೊರೆಸಿದ ಕೊಳವೆಬಾವಿಯನ್ನು ಜನಸೇವೆಗೆ ಸಮರ್ಪಣೆ ಮಾಡಿದರು. ನಂತರ ಮೀನಕೇರಾ ಗ್ರಾಪಂ ವ್ಯಾಪ್ತಿಯ ಬಸಿರಾಪುರಕ್ಕೆ ಭೇಟಿ ನೀಡಿ ಕುಡಿಯುವ ನೀರಿನ ಸಮಸ್ಯೆ ಕುರಿತು ಮಾಹಿತಿ ಪಡೆದು ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಪಿಡಿಒ ಪ್ರವಿಣ ಮಠಪತಿಗೆ ಸೂಚಿಸಿದರು.