ಮುಧೋಳದಲ್ಲಿ ಶಾಸಕ ಆರ್.ಬಿ. ತಿಮ್ಮಾಪೂರ ಸಾರ್ವಜನಿಕರನ್ನು ಭೇಟಿಯಾಗಿ ಅಹವಾಲುಗಳನ್ನು ಆಲಿಸಿದರು. ವಿವಿಧ ಇಲಾಖೆ ಅಧಿಕಾರಿಗಳು ಮತ್ತು ಸದುಗೌಡ ಪಾಟೀಲ, ಅಶೋಕ ಕಿವಡಿ, ಮುದಕಣ್ಣ ಅಂಬಿಗೇರ, ಸಂಗಪ್ಪ ಇಮ್ಮನವರ ಇತರರಿದ್ದರು.
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ಶಾಸಕ ಆರ್.ಬಿ. ತಿಮ್ಮಾಪೂರ ಸೂಚನೆ
ವಿವಿಧ ಇಲಾಖೆ ಅಧಿಕಾರಿಗಳು ಭಾಗಿ
ಮುಧೋಳ: ಸಾರ್ವಜನಿಕರ ದೈನಂದಿನ ಸಮಸ್ಯೆಗಳನ್ನು ಆಲಿಸಿ, ಅವುಗಳಿಗೆ ತಕ್ಷಣದ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಜನಸಂಪರ್ಕ ಕಾರ್ಯಕ್ರಮ ಅತ್ಯಂತ ಮಹತ್ವದ್ದಾಗಿದೆ ಎಂದು ಶಾಸಕ ಆರ್.ಬಿ. ತಿಮ್ಮಾಪೂರ ಹೇಳಿದರು.
ನಗರದಲ್ಲಿ ಶನಿವಾರ ಸಾರ್ವಜನಿಕರನ್ನು ಭೇಟಿಯಾಗಿ ಅವರ ಅಹವಾಲುಗಳನ್ನು ಹಾಗೂ ಕುಂದುಕೊರತೆಗಳನ್ನು ಕೂಲಂಕಷವಾಗಿ ಶಾಸಕ ಆರ್.ಬಿ. ತಿಮ್ಮಾಪೂರ ಆಲಿಸಿದರು. ಸ್ಥಳದಲ್ಲೇ ಸಾರ್ವಜನಿಕರಿಂದ ಅರ್ಜಿಗಳನ್ನು ಸ್ವೀಕರಿಸಿದ ಅಧಿಕಾರಿಗಳ ತಂಡ, ತಳಮಟ್ಟದ ಸಮಸ್ಯೆಗಳನ್ನು ಪರಿಹರಿಸಲು ಆದ್ಯತೆ ನೀಡಲಾಯಿತು.
ರಸ್ತೆ, ಕುಡಿಯುವ ನೀರು, ವಿದ್ಯುತ್ ಹಾಗೂ ವಿವಿಧ ಸರ್ಕಾರಿ ಯೋಜನೆಗಳ ಅನುಷ್ಠಾನದಲ್ಲಿ ಉಂಟಾಗಿರುವ ವಿಳಂಬದ ಬಗ್ಗೆ ಸಾರ್ವಜನಿಕರು ತಮ್ಮ ಅಳಲನ್ನು ಶಾಸಕರ ಮುಂದೆ ತೋಡಿಕೊಂಡರು.
ಸಮಸ್ಯೆಗಳನ್ನು ಆಲಿಸಿದ ನಂತರ, ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಯಿತು. ಯಾವುದೇ ವಿಳಂಬವಿಲ್ಲದೆ, ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣವೇ ಪರಿಹಾರ ಕಲ್ಪಿಸುವಂತೆ ಮತ್ತು ಕೆಲಸದಲ್ಲಿ ಪಾರದರ್ಶಕತೆಯನ್ನು ಕಾಯ್ದುಕೊಳ್ಳುವಂತೆ ತಾಕೀತು ಮಾಡಲಾಯಿತು.
ಜನ ಸಾಮಾನ್ಯರ ಧ್ವನಿಯಾಗಿ, ಅವರ ಪ್ರತಿಯೊಂದು ಸಮಸ್ಯೆಗೂ ಸಕಾರಾತ್ಮಕವಾಗಿ ಸ್ಪಂದಿಸಿ, ಶೀಘ್ರ ಪರಿಹಾರ ಒದಗಿಸಲು ನಮ್ಮ ಸರ್ಕಾರ ಹಾಗೂ ಆಡಳಿತ ಯಂತ್ರ ಸದಾ ಬದ್ಧವಾಗಿದೆ. ಆಡಳಿತ ಮತ್ತು ಸಾರ್ವಜನಿಕರ ನಡುವಿನ ಅಂತರವನ್ನು ಕಡಿಮೆ ಮಾಡುವ ಮೂಲಕ ಬಡವರ ಮತ್ತು ಸಾಮಾನ್ಯ ಜನರ ಕಷ್ಟಗಳಿಗೆ ಸ್ಪಂದಿಸುವುದು ನಮ್ಮ ಮೂಲ ಉದ್ದೇಶವಾಗಿದೆ ಎಂದು ಶಾಸಕ ಆರ್.ಬಿ. ತಿಮ್ಮಾಪೂರ ತಿಳಿಸಿದರು.
ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು, ಸ್ಥಳೀಯ ಕಾಂಗ್ರೆಸ್ ಅಧ್ಯಕ್ಷ ಸದುಗೌಡ ಪಾಟೀಲ್, ಅಶೋಕ ಕಿವಡಿ, ಮುದಕಣ್ಣ ಅಂಬಿಗೇರ, ಸಂಗಪ್ಪ ಇಮ್ಮನವರ ಹಾಗೂ ಅಪಾರ ಸಂಖ್ಯೆ ಸಾರ್ವಜನಿಕರು