

ಪ್ರಮುಖ ಮುಖ್ಯಾಂಶಗಳು
ಹುಮನಾಬಾದ್: ಬೀದರ್ ಸಹಕಾರ ಸಕ್ಕರೆ ಕಾರ್ಖಾನೆ (ಬಿಎಸ್ಎಸ್ಕೆ) ಮರು ಆರಂಭಿಸಲು ಕ್ರಮ ಕೈಗೊಳ್ಳಬೇಕು ಎಂದು ಮಂಗಳವಾರ ವಿಧಾನ ಪರಿಷತ್ ಸದಸ್ಯ ಡಾ.ಚಂದ್ರಶೇಖರ ಪಾಟೀಲ್ ಅಧಿವೇಶನದಲ್ಲಿ ಸರ್ಕಾರವನ್ನು ಒತ್ತಾಯಿಸಿದರು. ಬಿಎಸ್ಎಸ್ಕೆ ಬಂದ್ ಆಗಿದ್ದರಿಂದ ಜಿಲ್ಲೆಯ ರೈತರು, ಕಬ್ಬು ಬೆಳೆಗಾರರು ಹಾಗೂ ಕಾರ್ಖಾನೆ ಕಾರ್ಮಿಕರು ತೀವ್ರ ಸಂಕಷ್ಟ ಎದುರಿಸುವಂತಾಗಿದೆ. ಕಾರ್ಖಾನೆ ಮರು ಆರಂಭಿಸಿದರೆ ಬೆಳೆಗಾರರು ಹಾಗೂ ಕಾರ್ಮಿಕರಿಗೆ ಅನುಕೂಲವಾಗಲಿದೆ ಎಂದು ಸಕ್ಕರೆ ಸಚಿವ ರುದ್ರಪ್ಪ ಲಮಾಣಿ ಗಮನಕ್ಕೆ ತಂದರು. ಸ್ಪಂದಿಸಿದ ಸಕ್ಕರೆ ಸಚಿವ ರುದ್ರಪ್ಪ ಲಮಾಣಿ, ಕಾರ್ಖಾನೆ ಮರು ಆರಂಭಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳಿಂದ ಅಗತ್ಯ ಮಾಹಿತಿ ಸಂಗ್ರಹಿಸಿ ಪರಿಶೀಲನೆ ಬಳಿಕ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದು ಪಾಟೀಲ್ ತಿಳಿಸಿದ್ದಾರೆ.