2004ರ ಬ್ಯಾಚ್ನ ಐಎಎಸ್ ಅಧಿಕಾರಿಯಾಗಿದ್ದ ಜಿ.ಸತ್ಯವತಿಯವರು, ಕೋಲಾರ, ಚಿಕ್ಕಮಗಳೂರು ಜಿಲ್ಲೆಯ ಜಿಲ್ಲಾಧಿಕಾರಿಗಳಾಗಿ ಕಾರ್ಯನಿರ್ವಹಿಸಿದ್ದಾರೆ. ಜೊತೆಗೆ ಬಿಎಂಟಿಸಿಯ ಎಂಡಿ, ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕರಾಗಿ, ಕರ್ನಾಟಕ ಲೋಕಸೇವಾ ಆಯೋಗ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಕಾರ್ಯದರ್ಶಿಗಳಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದಾರೆ.