"ನಶೆ ಬಿಡಿ, ಖುಷಿ ಪಡಿ" ಎಂಬ ಸಂದೇಶದೊಂದಿಗೆ ಯುವಕರು ಹಾಗೂ ವಿದ್ಯಾರ್ಥಿಗಳು ಯಾವುದೇ ಒತ್ತಡಕ್ಕೂ ಮಣಿಯದೆ ಮಾದಕ ವಸ್ತುಗಳಿಂದ ದೂರ ಇರಬೇಕು. ತಮ್ಮ ದೇಹ ಹಾಗೂ ಮನಸ್ಸಿನ ಮೇಲೆ ನಿಯಂತ್ರಣ ಹೊಂದಬೇಕು ಎಂದು ಕರೆ ನೀಡಿದರು. ಡ್ರಗ್ಸ್ ಮುಕ್ತ ಕರ್ನಾಟಕ ಎನ್ನುವುದು ಕೇವಲ ಸರ್ಕಾರದ ಘೋಷಣೆಯಲ್ಲ, ಪ್ರತಿಯೊಬ್ಬ ಕನ್ನಡಿಗನ ಸಂಕಲ್ಪವಾಗಬೇಕು ಎಂದು ಹೇಳಿದರು.