ರೋಹಿಣಿ Vs ರೂಪಾ: ಇಬ್ಬರು ವೃತ್ತಿ ಜೀವನ ಹಾಳು ಮಾಡಿಕೊಳ್ಳುತ್ತಿದ್ದಿರಿ; ಪ್ರಕರಣ ಇತ್ಯರ್ಥಕ್ಕೆ ಕುರಿಯನ್​ ಜೋಸೆಫ್​ ನೇಮಿಸಿದ ಸುಪ್ರೀಂ! Rohini Sindhuri Vs Roopa Moudgil

ಐಎಎಸ್ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಡಿ. ರೂಪಾ ನಡುವಿನ ಮಾನನಷ್ಟ ಮೊಕದ್ದಮೆ ಪ್ರಕರಣ
ಐಎಎಸ್ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಡಿ. ರೂಪಾ ನಡುವಿನ ಮಾನನಷ್ಟ ಮೊಕದ್ದಮೆ ಪ್ರಕರಣ
Published on

ಪ್ರಮುಖ ಮುಖ್ಯಾಂಶಗಳು

  • ಐಎಎಸ್ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಡಿ. ರೂಪಾ ನಡುವಿನ ಮಾನನಷ್ಟ ಮೊಕದ್ದಮೆ ಪ್ರಕರಣ
  • ಪ್ರಕರಣ ಇತ್ಯರ್ಥಕ್ಕೆ ನಿವೃತ್ತ ಜಡ್ಜ್​​ ಕುರಿಯನ್​ ಜೋಸೆಫ್​ ನೇಮಕ
  • ಈ ಪ್ರಕರಣದಿಂದ ಇಬ್ಬರ ವೃತ್ತಿ ಜೀವನ ಹಾಳಾಗುವಂತಾಗಿದೆ
ನವದೆಹಲಿ: ಹಿರಿಯ ಐಎಎಸ್​ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್​ ಅಧಿಕಾರಿ ರೂಪಾ.ಡಿ. ಮೌದ್ಗಿಲ್ (Rohini Sindhuri Vs Roopa Moudgil) ನಡುವಿನ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್​ ಮಹತ್ವದ ಆದೇಶವನ್ನು ನೀಡಿದೆ.
ಶುಕ್ರವಾರ (ಜೂ.12) ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ, ಈ ಇಬ್ಬರ ನಡುವೆ ನಡೆಯುತ್ತಿರುವ ನಿರಂತರ ಮಾನನಷ್ಟ ಮೊಕದ್ದಮೆ ಪ್ರಕರಣಗಳನ್ನು ಇತ್ಯರ್ಥ ಪಡಿಸಲು, ನಿವೃತ್ತ ನ್ಯಾಯಮೂರ್ತಿ ​​ಕುರಿಯನ್​ ಜೋಸೆಫ್​ ಅವರನ್ನು ಸರ್ವೋಚ್ಚ ನ್ಯಾಯಾಲಯ ನೇಮಿಸಿದೆ.
ಈ ಮಾನನಷ್ಟ ಮೊಕದ್ದಮೆ ಮೂಲಕ ಇಬ್ಬರು ತಮ್ಮ ವೃತ್ತಿ ಜೀವನವನ್ನು ಹಾಳು ಮಾಡಿಕೊಳ್ಳುವಂತಾಗಿದೆ ಎಂದು ಅಭಿಪ್ರಾಯಮಟ್ಟ ನ್ಯಾಯಪೀಠ, ಜಸ್ಟೀಸ್​ ಕುರಿಯನ್​ ಮುಂದೆ ನಿಮ್ಮ ಹೇಳಿಕೆಯನ್ನು ದಾಖಲಿಸಿ ಎಂದು ಆದೇಶಿಸಿ, ಮುಂದಿನ ಎಲ್ಲಾ ಮಾನನಷ್ಟ ಪ್ರಕರಣಗಳಿಗೆ ತಡೆಯಾಜ್ಞೆ ನೀಡುವುದಾಗಿ ತಿಳಿಸಿದೆ.
ಪ್ರಕರಣದ ಹಿನ್ನಲೆ
2023ರಲ್ಲಿ ಹಿರಿಯ ಐಪಿಎಸ್​ ಅಧಿಕಾರಿ ರೂಪಾ ಮೌದ್ಗಿಲ್ ಅವರು ರೋಹಿಣಿ ಸಿಂಧೂರಿ ವಿರುದ್ಧ ಫೇಸ್‌ಬುಕ್‌ನಲ್ಲಿ ಸರಣಿ ಪೋಸ್ಟ್‌ಗಳನ್ನು ಹಾಕುವ ಮೂಲಕ ಈ ವಿವಾದ ಆರಂಭವಾಗಿತ್ತು. ರೋಹಿಣಿ ಸಿಂಧೂರಿ ಜಾಲಹಳ್ಳಿಯಲ್ಲಿ ಬೃಹತ್ ಬಂಗಲೆ ನಿರ್ಮಿಸಿದ್ದಾರೆ ಮತ್ತು ತಮ್ಮ ಆಸ್ತಿ ವಿವರದಲ್ಲಿ ಅದನ್ನು ಘೋಷಿಸಿಲ್ಲ ಎಂದು ರೂಪಾ ಆರೋಪಿಸಿದ್ದರು. ಅಲ್ಲದೆ ಕೆಲವು ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು.
ಇದಕ್ಕೆ ಪ್ರತಿಯಾಗಿ ರೋಹಿಣಿ ಸಿಂಧೂರಿ, ರೂಪಾ ವಿರುದ್ಧ ಸಿವಿಲ್ ಮತ್ತು ಕ್ರಿಮಿನಲ್ ಮಾನಹಾನಿ ಮೊಕದ್ದಮೆ ದಾಖಲಿಸಿದ್ದರು. ನಂತರ ಡಿ. ರೂಪಾ ಕೂಡ ರೋಹಿಣಿ ಸಿಂಧೂರಿ ವಿರುದ್ಧ ದೂರು ದಾಖಲಿಸಿದ್ದರು. ರೋಹಿಣಿ ತಮ್ಮನ್ನು ಮಾನಸಿಕ ಅಸ್ವಸ್ಥೆ ಎಂದು ಕರೆದು ಅವಮಾನಿಸಿದ್ದಾರೆ ಎಂದು ರೂಪಾ ಆರೋಪಿಸಿದ್ದರು. ಈ ಪ್ರಕರಣದ ವಿಚಾರಣೆ ಕರ್ನಾಟಕ ಹೈಕೋರ್ಟ್‌ನಲ್ಲಿ ನಡೆದು ರೋಹಿಣಿ ಸಿಂಧೂರಿ ಸಲ್ಲಿಸಿದ್ದ ಅರ್ಜಿ ವಜಾಗೊಂಡಿತ್ತು. ಈ ಆದೇಶವನ್ನು ಪ್ರಶ್ನಿಸಿ ರೋಹಿಣಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು, (ಏಜನ್ಸೀಸ್​).
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net