ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸಮಾವೇಶಕ್ಕೆ ಒಂದು ಕೋಟಿ ರೂ. ಬಿಡುಗಡೆ

ಕರ್ನಾಟನ ರಾಜ್ಯ ಪ್ರಾಥಮಿಕ ಶಿಕ್ಷಕರ ಸಂಘ
ಕರ್ನಾಟನ ರಾಜ್ಯ ಪ್ರಾಥಮಿಕ ಶಿಕ್ಷಕರ ಸಂಘ
Published on
ಬೆಂಗಳೂರು: ಕರ್ನಾಟನ ರಾಜ್ಯ ಪ್ರಾಥಮಿಕ ಶಿಕ್ಷಕರ ಸಂಘವು ಫೆ. 28 ರಂದು ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ ಶೈಕ್ಷಣಿಕ ಸಮ್ಮೇಳನ, ಧನ್ಯತಾ ಸಮರ್ಪಣೆ ಹಾಗೂ ಸುವರ್ಣ ಸಂಭ್ರಮೋತ್ಸವ ಕಾರ್ಯಕ್ರಮಕ್ಕೆ ರಾಜ್ಯ ಸರ್ಕಾರ ಒಂದು ಕೋಟಿ ರೂ. ಅನುದಾನವನ್ನು ನೀಡಿದೆ.
ಮುಖ್ಯಮಂತ್ರಿಗಳ ಆದೇಶದಂತೆ ಈ ಅನುದಾನವನ್ನು ಮರು ಹೊಂದಾಣಿಕೆ ಮಾಡಿ ನೀಡಲಾಗುತ್ತಿದೆ. ಯಾವ ಉದ್ದೇಶಕ್ಕೆ ಹಣ ಬಿಡುಗಡೆ ಮಾಡಲಾಗಿದೆಯೋ ಅದೇ ಉದ್ದೇಶಕ್ಕೆ ಬಳಸಬೇಕು. ಖರ್ಚು ವೆಚ್ಚದ ಬಿಲ್ಲುಗಳನ್ನು ಸರ್ಕಾರಕ್ಕೆ ಸಲ್ಲಿಸುವಂತೆ ಸೂಚಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ (ಯೋಜನೆ) ಶುಭಮಂಗಳಾ ಆರ್.ವಿ. ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net