ತಾಯಿ ಮತ್ತು ಮಕ್ಕಳ ಆಸ್ಪತ್ರೆ ಅಭಿವೃದ್ಧಿಗೆ 3 ಕೋಟಿ ರೂ. ಅನುದಾನ kgf

ತಾಯಿ ಮತ್ತು ಮಕ್ಕಳ ಆಸ್ಪತ್ರೆ ಅಭಿವೃದ್ಧಿಗೆ 3 ಕೋಟಿ ರೂ. ಅನುದಾನ Mother & Child Hospital
ತಾಯಿ ಮತ್ತು ಮಕ್ಕಳ ಆಸ್ಪತ್ರೆ ಅಭಿವೃದ್ಧಿಗೆ 3 ಕೋಟಿ ರೂ. ಅನುದಾನ Mother & Child Hospital
Published on

ಪ್ರಮುಖ ಮುಖ್ಯಾಂಶಗಳು

  • ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಅಭಿವೃದ್ಧಿ
  • ಬ್ರೀಟಿಷರ ಕಾಲದ ಹಳೇ ಕಟ್ಟಡ ನವೀಕರಣ
ಕೆಜಿಎಫ್​: ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಅಭಿವೃದ್ಧಿ ಹಾಗೂ ಆಧುನಿಕ ಉಪಕರಣಗಳನ್ನು ಒದಗಿಸಲು 3 ಕೋಟಿ ರೂ.ನಿಗದಿಪಡಿಸಲಾಗಿದ್ದು, ಬ್ರೀಟಿಷರ ಕಾಲದ ಹಳೇ ಕಟ್ಟಡ ನವೀಕರಿಸಿ, ಬ್ಲಾಕ್​ಗಳಾಗಿ ನಿರ್ಮಿಸಲು ಶಾಸಕಿ ರೂಪಕಲಾ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಇಲಾಖೆ ಅಧಿಕಾರಿಗಳೊಂದಿಗೆ ಇತ್ತೀಚೆಗೆ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿ ಮಾತನಾಡಿದ ಅವರು, ಯೋಜನಾ ವರದಿಯನ್ನು ತಯಾರಿಸಲು ತಿಳಿಸಿದ್ದು, ಅದರಂತೆ ಪುನ@ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ಇಲಾಖೆಯ ಇಂಜಿನಿಯರಗಳೊಂದಿಗೆ ಪರಿಶೀಲನೆ ನಡೆಸಲಾಗಿದೆ ಎಂದರು. 
ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಕಟ್ಟಡದ ಹಿಂದೆ ಇರುವ ಹಳೇ ಕಟ್ಟಡವನ್ನು ಕೆಡವಿ ಖಾಲಿ, ಇರುವ ಜಾಗವನ್ನು ಬಳಸಿಕೊಂಡು ಆಧುನಿಕ ಶೈಲಿಯಲ್ಲಿ ಹೆರಿಗೆ ಕೋಣೆ, ಶಸ್ತ್ರ ಚಿಕಿತ್ಸಾ ಕೊಠಡಿ, ತುರ್ತು ಪರಿಸ್ಥಿತಿಯಲ್ಲಿ ಮಕ್ಕಳನ್ನು ಆರೈಕೆ ಮಾಡುವ ಕೊಠಡಿ ನಿಮಾರ್ಣಕ್ಕೆ ಪ್ರಾಮುಖ್ಯತೆ ನೀಡಬೇಕು. ಗರ್ಭಿಣಿ ಸ್ತ್ರೀಯರು ಹಾಗೂ ಹೆರಿಗೆ ನಂತರ ಆಸ್ಪತ್ರೆಗೆ ಬರುವ ತಾಯಂದಿರಿಗೆ ಉತ್ತಮ ವಾತಾವರಣ ಸೃಷ್ಟಿಸುವುದೇ ತಮ್ಮ ಪ್ರಮುಖ ಉದ್ದೇಶ ಎಂದು ತಿಳಿಸಿದರು.
ನಿಗದಿಪಡಿಸಿರುವ ಅನುದಾನದಲ್ಲಿ ತಾಯಿ ಮತ್ತು ಮಕ್ಕಳ ಆರೈಕೆಗೆ ಅನುಕೂಲವಾಗುವಂತೆ ಕಟ್ಟಡ ನಿಮಾರ್ಣ ಮಾಡಿ, ಅನುದಾನ ಕಡಿಮೆಯಾದಲ್ಲಿ ತಾವು ಹಣಕಾಸನ್ನು ಒದಗಿಸುವುದಾಗಿ ತಿಳಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net