ಜಿಬಿಎನಲ್ಲಿ ಈವರೆಗೆ ರಾಜ್ಯದ ಗುತ್ತಿಗೆದಾರರು ಕೆಲಸ ಮಾಡುತ್ತಿದ್ದರು. ಹೊಸ 39,000 ಕೋಟಿ ರೂ. ಮೊತ್ತದ ಟೆಂಡರ್‌ನ್ನು ದೆಹಲಿಯ ಕಂಪನಿಗೆ ನೀಡಿದ್ದು, ಇದರಲ್ಲಿ 10,000 ಕೋಟಿ ರೂ. ಕಿಕ್‌ಬ್ಯಾಕ್ ಇದೆ. ಸಾಮಾನ್ಯವಾಗಿ ಪ್ರತಿ ವರ್ಷ ಟೆಂಡರ್ ಮಾಡುತ್ತಿದ್ದರೆ, ಈ ಬಾರಿ 30 ವರ್ಷ ಹಾಗೂ ಇನ್ನೂ ವಿಸ್ತರಣೆಯ ಅವಕಾಶದ 5 ಸೇರಿ ಒಟ್ಟು 35 ವರ್ಷಕ್ಕೆ ದೆಹಲಿಯ ಎಂಎಸ್‌ಡಬ್ಲ್ಯು ಸೊಲ್ಯೂಶನ್ಸ್ ಲಿಮಿಟೆಡ್ ಅಥವಾ ರಾಮ್‌ಕಿ ಕಂಪನಿಗೆ ಟೆಂಡರ್ ನೀಡಲಾಗಿದೆ. ಬೆಂಗಳೂರು ಉತ್ತರ ಹಾಗೂ ದಕ್ಷಿಣಕ್ಕೆ ಎರಡು ಪ್ಯಾಕೇಜ್ ಮಾಡಲಾಗಿದೆ. ಇದಕ್ಕೂ ಮುನ್ನ ಸರ್ಕಾರಿ ಸ್ವಾಮ್ಯದ ರೈಟ್ಸ್ ಕಂಪನಿಯಿಂದ ಸಲಹೆ ಪಡೆದು, ಆ ಸಲಹೆಯನ್ನು ಕಸದ ಬುಟ್ಟಿಗೆ ಹಾಕಲಾಗಿದೆ. ಇದರ ಬದಲು ಮಾನ್ಯತೆ ಇಲ್ಲದ ಕಂಪನಿಗೆ ಸಲಹೆಗಾಗಿ ಅವಕಾಶ ನೀಡಲಾಗಿದೆ. ಈಗ ಕಸದ ಟೆಂಡರ್‌ನ್ನು ಎಂಎಸ್‌ಡಬ್ಲ್ಯು ಕಂಪನಿಗೆ ನೀಡಿ, 1,500 ಕೋಟಿ ಸಾಲ ಪಡೆಯಲು ಕೂಡ ಅವಕಾಶ ಕೊಡಲಾಗಿದೆ. ಇದಕ್ಕೆ ಜಮೀನನ್ನು ಕೂಡ ಸರ್ಕಾರದಿಂದಲೇ ನೀಡಲಾಗಿದೆ ಎಂದರು.