ರೈತರ ಆರ್ಥಿಕ ನಷ್ಟ ಸಂಬಂಧ ಶಾಸಕ ದಿನೇಶ್ ಗೂಳಿಗೌಡ, ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದು ಗಮನ ಸೆಳೆದಿದ್ದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಮುಖ್ಯಮಂತ್ರಿ, ಕೂಡಲೇ ಅಗತ್ಯ ಕ್ರಮ ತೆಗೆದುಕೊಳ್ಳುವಂತೆ ಸಕ್ಕರೆ ನಿರ್ದೇಶನಾಲಯದ ಆಯುಕ್ತರಿಗೆ ಸೂಚನೆ ನೀಡಿದ್ದಾರೆ. ಇದರ ಬೆನ್ನಲ್ಲೇ 7 ಸಕ್ಕರೆ ಕಾರ್ಖಾನೆಗಳು ರೈತರ ಖಾತೆ ವಿವರವನ್ನು ನೀಡಿದ್ದು, ರೈತರಿಗೆ ಸರ್ಕಾರದ ಪಾಲಿನ 50 ರೂ. ಪ್ರೋತ್ಸಾಹ ಧನ ಜಮೆಯಾಗಲಿದೆ. ಇನ್ನು ರೈತರ ಖಾತೆಗಳಿಗೆ ಹಣ ಜಮೆ ಮಾಡುವಂತೆ ಟ್ರಜರಿಗೆ ಜಿಲ್ಲಾಧಿಕಾರಿಗಳು ವಿವರಗಳನ್ನು ನೀಡಿದ್ದಾರೆ.