ಕಾರ್ಯಕಾರಿಣಿಯಲ್ಲಿ ಭಾಗಿಯಾಗುವ ಪ್ರಮುಖರು ಸಭೆಯಲ್ಲಿ ಸರಸಂಘಚಾಲಕ ಡಾ.ಮೋಹನ ಭಾಗವತ, ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ, ಸಹ ಸರಕಾರ್ಯವಾಹರಾದ ಡಾ.ಕೃಷ್ಣಗೋಪಾಲ, ಸಿ.ಆರ್.ಮುಕುಂದ, ಅರುಣಕುಮಾರ, ರಾಮದತ್ತ, ಆಲೋಕ ಕುಮಾರ, ಅತುಲ ಲಿಮಯೆ ಹಾಗೂ ಅಖಿಲ ಭಾರತೀಯ ಕಾರ್ಯ ವಿಭಾಗ ಪ್ರಮುಖರು, ಅಖಿಲ ಭಾರತೀಯ ಕಾರ್ಯಕಾರಿ ಮಂಡಳಿ ಸದಸ್ಯರು ಭಾಗವಹಿಸಲಿದ್ದಾರೆ. ಸಭೆ ಹಿನ್ನೆಲೆಯಲ್ಲಿ ಸರಸಂಘಚಾಲಕ ಡಾ.ಮೋಹನ ಭಾಗವತ ಜು.6ರಂದೇ ಬೆಳಗಾವಿಗೆ ಆಗಮಿಸಲಿದ್ದಾರೆ.