ಗ್ರಾಮೀಣ ಮಕ್ಕಳಿಗೆ ಉತ್ತಮ ಶಿಕ್ಷಣ ಸಿಗಲಿ

ಗ್ರಾಮೀಣ ಮಕ್ಕಳಿಗೆ ಉತ್ತಮ ಶಿಕ್ಷಣ ಸಿಗಲಿ
ಗ್ರಾಮೀಣ ಮಕ್ಕಳಿಗೆ ಉತ್ತಮ ಶಿಕ್ಷಣ ಸಿಗಲಿ
Published on
ಮುಳಬಾಗಿಲು: ಗ್ರಾಮೀಣ ಪ್ರದೇಶದಿಂದ ಸರ್ಕಾರಿ ಶಾಲೆಗಳಿಗೆ ಬರುವ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ದೊರೆಯಬೇಕೆಂಬ ಉದ್ದೇಶದಿಂದ ಧರ್ಮಸ್ಥಳ ಧಮಾರ್ಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆ ಅವರು ವರ್ಷಕ್ಕೆ 52 ಸಾವಿರ ವಿದ್ಯಾರ್ಥಿಗಳ ವೃತ್ತಿಪರ ಶಿಕ್ಷಣಕ್ಕೆ 45 ಕೋಟಿ ರೂ. ಖರ್ಚು ಮಾಡುತ್ತಿದ್ದಾರೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಾಲೂಕು ಯೋಜನಾಧಿಕಾರಿ ಸಿ.ಹರೀಶ್​ ಕುಮಾರ್​ ತಿಳಿಸಿದರು. education
ತಾಲೂಕಿನ ಆಲಂಗೂರು ಕ್ರಾಸ್​ ಬಳಿ ಇರುವ ಸರ್ಕಾರಿ ಪ್ರೌಢ ಶಾಲೆಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯಿಂದ ಹಮ್ಮಿಕೊಂಡಿದ್ದ ವಿಶೇಷ ಬೋಧನಾ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮಾತನಾಡಿ, ಇಲ್ಲಿನ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಬೇಕೆಂಬ ಉದ್ದೇಶದಿಂದ ಬೋಧಕರಿಗೆ ಗೌರವಧನ ನೀಡಿ ವಿಶೇಷ ತರಗತಿ ನಡೆಸಲಾಗಿದೆ. ಮುಂದಿನ ವರ್ಷದಲ್ಲೂ ವಿಭಿನ್ನ ರೀತಿಯಲ್ಲಿ ಬೋಧನಾ ತರಗತಿ ನಡೆಸಲಾಗುವುದು ಎಂದು ತಿಳಿಸಿದರು.
ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂಬ ಉದ್ದೇಶದಿಂದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಹೆಚ್ಚು ಒತ್ತು ನೀಡುತ್ತಿದೆ. ಪೀಠೋಪಕರಣ ಅವಶ್ಯ ಇರುವ ಶಾಲೆ ಗುರುತಿಸಿ ಅವುಗಳನ್ನು ನೀಡಲಾಗುತ್ತಿದೆ ಎಂದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net