ಬೆಂಗಳೂರಿನ ಗೃಹ ನಿರ್ಮಾಣ ಮಂಡಳಿ ಕೇಂದ್ರ ಕಚೇರಿಯಲ್ಲಿ ಶಾಸಕ ರಾಜಾ ವೇಣುಗೋಪಾಲ ನಾಯಕ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ಸುರಪುರ ಕ್ಷೇತ್ರಕ್ಕೆ ಸಂತ ಶಿಶುನಾಳ ಶರೀಫ್ ಸಿಬಿಎಸ್ಇ ಮಾದರಿ ಶಾಲೆ ಮಂಜೂರು ಮಾಡುವಂತೆ ಮನವಿ ಸಲ್ಲಿಸಿದರು
ಸುರಪುರ: ಪ್ರಸಕ್ತ ಸಾಲಿನ ಬಜೆಟ್ನಲ್ಲಿ ರಾಜ್ಯ ಸರ್ಕಾರ ಘೋಷಿಸಿರುವ ಪ್ರತಿಷ್ಠಿತ ಸಂತ ಶಿಶುನಾಳ ಶರೀಫ್ ಸಿಬಿಎಸ್ಇ ಶಾಲೆಯನ್ನು ಸುರಪುರ ಮತಕ್ಷೇತ್ರಕ್ಕೆ ಮಂಜೂರು ಮಾಡಬೇಕು ಎಂದು ಶಾಸಕ ರಾಜಾ ವೇಣುಗೋಪಾಲ ಮನವಿ ಮಾಡಿದ್ದಾರೆ.
ಮತಕ್ಷೇತ್ರದ ಶೈಕ್ಷಣಿಕ ಅಭಿವೃದ್ಧಿಗೆ ಒತ್ತು ನೀಡುತ್ತಿರುವ ಶಾಸಕರು, ಬೆಂಗಳೂರಿನಲ್ಲಿ ವಸತಿ, ವಕ್ಫ್ ಮತ್ತು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ಭೇಟಿ ಮಾಡಿ ಈ ಕುರಿತು ಮನವಿ ಸಲ್ಲಿಸಿ ಅವರೊಂದಿಗೆ ಮಹತ್ವದ ಚರ್ಚೆ ನಡೆಸಿದರು.
ನನ್ನ ೇತ್ರದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಹಾಗೂ ಆಧುನಿಕ ಶಿಕ್ಷಣ ಒದಗಿಸುವ ಉದ್ದೇಶದಿಂದ ಈ ಮಾದರಿ ಶಾಲೆ ಅತ್ಯಂತ ಅಗತ್ಯವಾಗಿದ್ದು, ಹೀಗಾಗಿ ಕೂಡಲೇ ಮಂಜೂರು ಮಾಡಬೇಕು ಎಂದು ಅವರು ಸಚಿವರಿಗೆ ಒತ್ತಾಯಿಸಿದರು. ಈ ವೇಳೆ ಶಾಸಕರ ಮನವಿಗೆ ಸಚಿವರು ಸಕಾರಾತ್ಮಕವಾಗಿ ಭರವಸೆ ನೀಡಿದ್ದಾರೆ ಎಂದು ಹೇಳಿದರು. ಈ ವೇಳೆ ಶಾಸಕ ಶಿವಲಿಂಗೇಗೌಡ ಸೇರಿ ಇತರರಿದ್ದರು.