ಭಕ್ತರ ಸಮ್ಮುಖದಲ್ಲಿ ಬಲಿಪೂಜೆ, ಪ್ರಾರ್ಥನೆ

ಅಬ್ಬೂರುಕಟ್ಟೆಯ ಸಂತ ಲಾರೆನ್ಸ್ ಚರ್ಚ್‌ನಲ್ಲಿ ಮೇರಿಮಾತೆ ಜಯಂತಿ ಅಂಗವಾಗಿ ಆಯೋಜಿಸಿದ್ದ ವಿಶೇಷ ಪೂಜೆಯಲ್ಲಿ ಭಕ್ತರು ಪಾಲ್ಗೊಂಡಿದ್ದರು.
ಅಬ್ಬೂರುಕಟ್ಟೆಯ ಸಂತ ಲಾರೆನ್ಸ್ ಚರ್ಚ್‌ನಲ್ಲಿ ಮೇರಿಮಾತೆ ಜಯಂತಿ ಅಂಗವಾಗಿ ಆಯೋಜಿಸಿದ್ದ ವಿಶೇಷ ಪೂಜೆಯಲ್ಲಿ ಭಕ್ತರು ಪಾಲ್ಗೊಂಡಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಅಬ್ಬೂರುಕಟ್ಟೆ ಗ್ರಾಮದ ಸಂತ ಲಾರೆನ್ಸ್ ಚರ್ಚ್‌
  • ಮೇರಿಮಾತೆ ಜಯಂತಿ
ಸೋಮವಾರಪೇಟೆ: ಸಮೀಪದ ಅಬ್ಬೂರುಕಟ್ಟೆ ಗ್ರಾಮದ ಸಂತ ಲಾರೆನ್ಸ್ ಚರ್ಚ್‌ನಲ್ಲಿ ಮಂಗಳವಾರ ಮೇರಿಮಾತೆ ಜಯಂತಿಯನ್ನು ಸಡಗರ-ಸಂಭ್ರಮದಿಂದ ಆಚರಿಸಲಾಯಿತು.
ಫಾದರ್ ಜಾಕೊಬ್ ಕೊಲ್ಲನೂರು ಅವರ ನೇತೃತ್ವದಲ್ಲಿ ಒಂಬತ್ತು ದಿನಗಳಿಂದ ಚರ್ಚ್‌ನಲ್ಲಿ ವಿಶೇಷ ಪ್ರಾರ್ಥನೆ ಹಾಗೂ ಮೇರಿಮಾತೆಯ ಪ್ರತಿಮೆಗೆ ಪುಷ್ಪಾರ್ಚನೆ ನಡೆಯಿತು. ಕೊನೆಯ ದಿನ ನೂರಾರು ಭಕ್ತರ ಸಮ್ಮುಖದಲ್ಲಿ ಬಲಿಪೂಜೆ, ಪ್ರಾರ್ಥನೆ ಹಾಗೂ ಮೇರಿಮಾತೆಯ ಪ್ರತಿಮೆಗೆ ಪುಷ್ಪಾರ್ಚನೆ ನೆರವೇರಿಸಲಾಯಿತು.
ಈ ಸಂದರ್ಭ ಭಕ್ತರಿಗೆ ಹೊಸ ಬೆಳೆ ಭತ್ತ ಹಾಗೂ ಮಕ್ಕಳಿಗೆ ಕಬ್ಬು ವಿತರಿಸಲಾಯಿತು. ಪಾಲನಾ ಸಮಿತಿ ಸದಸ್ಯರಾದ ಎಸ್.ಎಂ. ಡಿಸಿಲ್ವ, ರೋಯನ್ ಡಿಸೋಜಾ, ರಾಯನ್ ಫಿಲೋಮಿನಾ ಮತ್ತಿತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net