ಕಾರ್ಮಿಕರ ಕೆಲಸಕ್ಕೆ ಸುರಕ್ಷತಾ ಸಾಧನ ಮುಖ್ಯ

ಒಳ ಚರಂಡಿ ಹಾಗೂ ಸೆಪ್ಟಿಕ್ ಟ್ಯಾಂಕ್ ಶುಚಿಗೊಳಿಸುವ ಪೌರಕಾರ್ಮಿಕರಿಗೆ ಬೇಲೂರು ಪುರಸಭೆ ಮುಖ್ಯಾಧಿಕಾರಿ ಬಸವರಾಜ್ ಸಿಗ್ಗಾವಿ ಸುರಕ್ಷತಾ ಕಿಟ್ ವಿತರಿಸಿದರು.
ಒಳ ಚರಂಡಿ ಹಾಗೂ ಸೆಪ್ಟಿಕ್ ಟ್ಯಾಂಕ್ ಶುಚಿಗೊಳಿಸುವ ಪೌರಕಾರ್ಮಿಕರಿಗೆ ಬೇಲೂರು ಪುರಸಭೆ ಮುಖ್ಯಾಧಿಕಾರಿ ಬಸವರಾಜ್ ಸಿಗ್ಗಾವಿ ಸುರಕ್ಷತಾ ಕಿಟ್ ವಿತರಿಸಿದರು.
Published on

ಪ್ರಮುಖ ಮುಖ್ಯಾಂಶಗಳು

  • ಪುರಸಭೆ ಮುಖ್ಯಾಧಿಕಾರಿ ಬಸವರಾಜ್ ಸಿಗ್ಗಾವಿ
  • ಒಳಚರಂಡಿ ಹಾಗೂ ಸೆಪ್ಟಿಕ್ ಟ್ಯಾಂಕ್ ಶುಚಿಗೊಳಿಸುವ ಪೌರಕಾರ್ಮಿಕರಿಗೆ
ಬೇಲೂರು: ಪೌರಕಾರ್ಮಿಕರ ಸುರಕ್ಷತೆ ಮತ್ತು ಆರೋಗ್ಯ ಕಾಪಾಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಮಸ್ತೆ ದಿನಾಚರಣೆ ಯೋಜನೆ ಜಾರಿಗೊಳಿಸಿದ್ದು, ಈ ನಿಮಿತ್ತ ಒಳ ಚರಂಡಿ ಹಾಗೂ ಸೆಪ್ಟಿಕ್ ಟ್ಯಾಂಕ್ ಶುಚಿಗೊಳಿಸುವ ಕಾರ್ಮಿಕರಿಗೆ ಅಗತ್ಯ ಸುರಕ್ಷತಾ ಸಾಮಗ್ರಿ ಒದಗಿಸಲಾಗಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಬಸವರಾಜ್ ಸಿಗ್ಗಾವಿ ಹೇಳಿದರು.
ಒಳಚರಂಡಿ ಹಾಗೂ ಸೆಪ್ಟಿಕ್ ಟ್ಯಾಂಕ್ ಶುಚಿಗೊಳಿಸುವ ಪೌರಕಾರ್ಮಿಕರಿಗೆ ನಮಸ್ತೆ ದಿನಾಚರಣೆ ಅಂಗವಾಗಿ ಮಂಗಳವಾರ ಸುರಕ್ಷತಾ ಕಿಟ್ ವಿತರಿಸಿ ಮಾತನಾಡಿದರು. ಕಾರ್ಮಿಕರು ಕೆಲಸ ಮಾಡುವ ಸಂದರ್ಭದಲ್ಲಿ ಅವಘಡ ತಡೆಗಟ್ಟುವುದು ಇದರ ಪ್ರಮುಖ ಉದ್ದೇಶ. ಒಳಚರಂಡಿ ಹಾಗೂ ಟ್ಯಾಂಕ್‌ಗಳ ಸ್ವಚ್ಛತಾ ಕಾರ್ಯ ಅತ್ಯಂತ ಅಪಾಯಕಾರಿಯಾಗಿದ್ದು, ಯಾವುದೇ ಕಾರಣಕ್ಕೂ ಸುರಕ್ಷತಾ ಸಾಧನ ಬಳಸದೆ ಕೆಲಸಕ್ಕೆ ಕಾರ್ಮಿಕರು ಇಳಿಯಬಾರದು. ಪುರಸಭೆಯಿಂದ ವಿತರಿಸಲಾಗಿರುವ ಸುರಕ್ಷತಾ ಶೂ, ರಕ್ಷಣಾತ್ಮಕ ಉಡುಪು ಸೇರಿದಂತೆ ಅಗತ್ಯ ಉಪಕರಣಗಳನ್ನು ಕಡ್ಡಾಯವಾಗಿ ಬಳಸಬೇಕು ಎಂದು ಹೇಳಿದರು.
ಪೌರಕಾರ್ಮಿಕರು ನಗರದ ಸ್ವಚ್ಛತೆ ಹಾಗೂ ಸಾರ್ವಜನಿಕ ಆರೋಗ್ಯ ಕಾಪಾಡುವಲ್ಲಿ ಮಹತ್ವದ ಪಾತ್ರ ವಹಿಸುತ್ತಿದ್ದು, ಅವರ ಶ್ರಮಕ್ಕೆ ಸರ್ಕಾರ ಮತ್ತು ಸ್ಥಳೀಯ ಸಂಸ್ಥೆಗಳು ಹೆಚ್ಚಿನ ಆದ್ಯತೆ ನೀಡುತ್ತಿವೆ. ಅವರ ಸುರಕ್ಷತೆ, ಆರೋಗ್ಯ ಮತ್ತು ಸಾಮಾಜಿಕ ಭದ್ರತೆಯನ್ನು ಖಾತ್ರಿ ಪಡಿಸಲು ವಿವಿಧ ಕಲ್ಯಾಣ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲಾಗುತ್ತಿದೆ ಎಂದರು.
ಪುರಸಭೆ ಆರೋಗ್ಯಾಧಿಕಾರಿ ಲೋಹಿತ್, ಇಂಜಿನಿಯರ್ ಮೋಹನ್, ಸಂಜಯ್, ಕುಮಾರ್, ಪೌರಕಾರ್ಮಿಕರಾದ ಹರೀಶ್, ಹೋಬಳೇಶ್, ಉಮೇಶ್ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net