ಮಾರಾಟ, ಸಾಗಣೆ, ಸೇವನೆ ಕಾನೂನು ಬಾಹಿರ / ANEKAL

ಜಿಗಣಿಯಲ್ಲಿ ಪೊಲೀಸ್​ ಇಲಾಖೆಯಿಂದ ಹಮ್ಮಿಕೊಂಡಿದ್ದ ಮಾದಕ ವಸ್ತು "ಬೇಡ ಬ್ರೋ ಅಭಿಯಾನದ ಭಾಗವಾಗಿ ಪೊಲೀಸರು ಮಕ್ಕಳಿಗೆ ಹಾಗೂ ಶಿಕಿಯರಿಗೆ ಮಾಹಿತಿ ಪತ್ರ ನೀಡಿದರು.
ಜಿಗಣಿಯಲ್ಲಿ ಪೊಲೀಸ್​ ಇಲಾಖೆಯಿಂದ ಹಮ್ಮಿಕೊಂಡಿದ್ದ ಮಾದಕ ವಸ್ತು "ಬೇಡ ಬ್ರೋ ಅಭಿಯಾನದ ಭಾಗವಾಗಿ ಪೊಲೀಸರು ಮಕ್ಕಳಿಗೆ ಹಾಗೂ ಶಿಕಿಯರಿಗೆ ಮಾಹಿತಿ ಪತ್ರ ನೀಡಿದರು.
Published on

ಆನೇಕಲ್ :

ಯುವಕರನ್ನು ಮಾದಕ ದ್ರವ್ಯ ಜಾಲದಿಂದ ದೂರವಿಡುವುದು ಹಾಗೂ ಅವುಗಳ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಜಿಗಣಿ ಪೊಲೀಸ್​ ಠಾಣೆ ವ್ಯಾಪ್ತಿಯ ವಿವಿಧ ಶಾಲೆ, ಕಾಲೇಜು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ "ಡ್ರಗ್ಸ್​ ಬೇಡ ಬ್ರೋ' ಅಭಿಯಾನ ಹಮ್ಮಿಕೊಳ್ಳಲಾಗಿತ್ತು.

ಶಾಲಾ&ಕಾಲೇಜು ವಿದ್ಯಾರ್ಥಿಗಳು ಹಾಗೂ ಯುವಕರು ಮಾದಕ ವಸ್ತುಗಳ ವ್ಯಸನಕ್ಕೆ ಬಲಿಯಾಗುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿ ಮತ್ತು ಅಪರಾಧಮುಕ್ತ ಸಮಾಜ ನಿರ್ಮಾಣಕ್ಕೆ ಅಭಿಯಾನದ ಭಾಗವಾಗಿ ವಿದ್ಯಾರ್ಥಿಗಳಿಗೆ ಡ್ರಗ್ಸ್​ ಸೇವನೆಯಿಂದ ಆರೋಗ್ಯದ ಮೇಲೆ ಉಂಟಾಗುವ ಹಾನಿ, ಮಾನಸಿಕ ಸ್ಥೆರ್ಯದ ಕುಸಿತ ಮತ್ತು ವ್ಯಕ್ತಿಯ ವೈಯಕ್ತಿಕ ಹಾಗೂ ಕುಟುಂಬದ ಮೇಲಾಗುವ ದುಷ್ಪರಿಣಾಮಗಳ ಕುರಿತು ಮನವರಿಕೆ ಮಾಡಲಾಯಿತು.

ಮಾದಕ ದ್ರವ್ಯಗಳ ಮಾರಾಟ, ಸಾಗಣೆ ಮತ್ತು ಸೇವನೆ ಕಾನೂನು ಬಾಹಿರವಾಗಿದ್ದು, ಕಠಿಣ ಕಾನೂನು ಶಿೆಗೆ ಗುರಿಯಾಗಬೇಕಾಗುತ್ತದೆ ಎಂದೂ ಪೊಲೀಸ್​ ಅಧಿಕಾರಿಗಳು ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿದರು.

ಯಾವುದೇ ರೀತಿಯ ಮಾದಕ ವಸ್ತುಗಳ ಜಾಲದ ಬಗ್ಗೆ ಮಾಹಿತಿ ಸಿಕ್ಕರೆ ಕೂಡಲೇ ಪೊಲೀಸರಿಗೆ ತಿಳಿಸಬೇಕು ಎಂದು ಮನವಿ ಮಾಡಿದರು. ಜಿಗಣಿ ಠಾಣೆ ಅಧಿಕಾರಿಗಳು ಹಾಗೂ ಸಿಬ್ಬಂದಿ ನೇತೃತ್ವದಲ್ಲಿ ನಡೆದ ಜಾಗೃತಿ ಕಾರ್ಯಕ್ರಮದಲ್ಲಿ ನೂರಾರು ವಿದ್ಯಾರ್ಥಿಗಳು, ಶಿಕರು ಮತ್ತು ಸ್ಥಳಿಯರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net