ಮತ್ತೊಂದು ಮೂಲದಿಂದ ತಿಳಿದು ಬಂದ ಮಾಹಿತಿ ಪ್ರಕಾರ ಸಿರಿಜನ್ ಮತ್ತು ರೀತಾ ನೇಪಾಳದಲ್ಲಿದ್ದಾಗ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಈ ವಿಚಾರ ತಿಳಿದ ಪಾಲಕರು, ಮೊದಲಿಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ಆ ಬಳಿಕ ಇಬ್ಬರು ಸಾಯುವ ಬೆದರಿಕೆ ಹಾಕಿದ ಬಳಿಕ ಮದುವೆ ಮಾಡಿಕೊಳ್ಳುವಂತೆ ಹೇಳಿದ್ದರು. ಆದರೆ, ಇಬ್ಬರಿಗೂ ಮುಜುಗರ ಉಂಟಾಗಿದೆ. ಹೀಗಾಗಿ 15 ದಿನಗಳ ಹಿಂದಷ್ಟೇ ಬೆಂಗಳೂರಿಗೆ ಬಂದಿದ್ದರು. ಇಬ್ಬರು ಬೇರೆ ಬೇರೆ ಸ್ಥಳಗಳಲ್ಲಿ ವಾಸವಾಗಿದ್ದರಿಂದ ಬೇಸರಗೊಂಡಿದ್ದರು. ಇದರಿಂದಾಗಿ ಖಿನ್ನತೆಗೆ ಒಳಗಾಗಿದ್ದ ಇಬ್ಬರು ಒಂದೆ ಮರಕ್ಕೆ ಒಂದೇ ವೇಲ್ನಿಂದ ಕುತ್ತಿಗೆಗೆ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿವೆ.