ದೇವಾಲಯದ ವಾರ್ಷಿಕ ಹಬ್ಬದ ಸಂದರ್ಭ ದೇವಾಲಯಕ್ಕೆ ಒಳಪಟ್ಟ ಕುಟುಂಬಗಳು ಸಾಂಪ್ರದಾಯಿಕ ವೇಷ ಭೂಷಣದೊಂದಿಗೆ ದೇವಾಲಯದ ಆವರಣದಲ್ಲಿ ಸೇರಿ ಸಾಂಪ್ರದಾಯಿಕ ಬೊಳಕಾಟ್ ನೃತ್ಯ ಸೇವೆ ಸಲ್ಲಿಸಿದರು. ವಿಶೇಷವೆಂದರೆ ಹಬ್ಬದ ಕಟ್ಟಿನ ಮರುದಿನದಿಂದ 11 ದಿನಗಳ ಕಾಲ ಬೆಳಗಿನ ಜಾವದಲ್ಲಿ ದೀಪದ ಬೆಳಕಿನಲ್ಲಿ ದೇವರಿಗೆ ಬೊಳಕಾಟ್ ನೃತ್ಯ ಸೇವೆ ಸಾಂಪ್ರದಾಯಿಕ ಉಡುಪಿನಲ್ಲಿ ಸಲ್ಲಿಸುವುದು ವಿಶೇಷವಾಗಿದೆ.