ಹುಮನಾಬಾದ್: ಪದ ಸಂಘಟನೆ ಬಲವರ್ಧನೆ ಹಿನ್ನೆಲೆಯಲ್ಲಿ ಸಂಟನೆ ಸೃಜನ್ ಅಭಿಯಾನ ಬುಧವಾರ ಬೆಳಗ್ಗೆ 10ಕ್ಕೆ ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಆಯೋಜಿಸಲಾಗಿದೆ. ಮಾಜಿ ಸಚಿವ ರಾಜಶೇಖರ ಪಾಟೀಲ್ ನೇತೃತ್ವದಲ್ಲಿ ಪಕ್ಷದ ಸಂಘಟನೆ ಬಲಪಡಿಸುವ ಕುರಿತು ಸಮಗ್ರ ಸಮಾಲೋಚನೆ ನಡೆಸಲಾಗುವುದು.ಕಾರ್ಯಕ್ರಮಕ್ಕೆ ಎಐಸಿಸಿ ವೀಕ ರಾಜೇಶ್ ಲಿಲೋಥಿಯಾ ಆಗಮಿಸಲಿದ್ದು, ವಿಧಾನ ಪರಿಷತ್ ಸದಸ್ಯರಾದ ಡಾ.ಚಂದ್ರಶೇಖರ ಪಾಟೀಲ್, ಭೀಮರಾವ ಪಾಟೀಲ್ ಭಾಗವಹಿಸಲಿದ್ದಾರೆ. ತಾಲೂಕಿನ ಪಕ್ಷದ ಮುಂಚೂಣಿ ಘಟಕಗಳ ಪದಾಧಿಕಾರಿಗಳು, ವಿವಿಧ ಘಟಕಗಳ ನಾಯಕರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಓಂಕಾರ ತುಂಬಾ ಹಾಗೂ ಪಟ್ಟಣ ಕಾಂಗ್ರೆಸ್ ಘಟಕದ ಅಧ್ಯಕ್ಷ ಅಫ್ಸರ್ಮಿಯಾ ಪ್ರಕಟಣೆಯಲ್ಲಿ ಕೋರಿದ್ದಾರೆ.