ಮಹಿಳಾ ಸಬಲೀಕರಣಕ್ಕೆ ಸಂಜೀವಿನಿ ಸಂತೆ / NANDAGDUDI

ಹೊಸಕೋಟೆ ತಾಲೂಕಿನ ನಂದಗುಡಿಯಲ್ಲಿ ಆಯೋಜಿಸಿದ್ದ ಸಂಜೀವಿನಿ ಸಂತೆ ಕಾರ್ಯಕ್ರಮದಲ್ಲಿ ನಂದಗುಡಿ ಗ್ರಾಪಂ ಕಾರ್ಯದರ್ಶಿ ವೆಂಕಟೇಶ್​, ತಾಲೂಕು ಕಾರ್ಯಕ್ರಮದ ವ್ಯವಸ್ಥಾಪಕ ಕಿರಣ್​, ತಾಲೂಕು ವ್ಯವಸ್ಥಾಪಕ (ಕೃಷಿಯೇತರ) ಮಣಿಕಂಠ, ಮುತ್ಯಾಲಮ್ಮ ಸಂಜೀವಿನಿ ಗ್ರಾಪಂ ಮಟ್ಟದ ಒಕ್ಕೂಟದ ಅಧ್ಯೆ ಸುನಂದಮ್ಮ, ಕಾರ್ಯದರ್ಶಿ ಮಂಜುಳಮ್ಮ, ಖಜಾಂಚಿ ಅಮರಾವತಿ, ಸ್ಥಳಿಯ ಸಂಪನ್ಮೂಲ ವ್ಯಕ್ತಿ ಸೌಮ್ಯಾ,  ಕೃಷಿ ಸಖಿ ಸೌಮ್ಯಾ, ಪಶು ಸಖಿ ಕವಿತಾ ಇದ್ದರು.

Published on
ನಂದಗುಡಿ : ಗ್ರಾಮೀಣ ಮಹಿಳಾ ಉದ್ಯಮಿಗಳ ಕೌಶಲ ಪ್ರದರ್ಶನ ಮತ್ತು ಆರ್ಥಿಕ ಸಬಲೀಕರಣಕ್ಕೆ ಇದು ಉತ್ತಮ ವೇದಿಕೆಯಾಗಿದ್ದು, ಸ್ಥಳಿಯವಾಗಿ ತಯಾರಿಸಿದ ಕರಕುಶಲ ವಸ್ತುಗಳು ಮತ್ತು ಆಹಾರ ಪದಾರ್ಥಗಳನ್ನು ಗ್ರಾಹಕರಿಗೆ ನೇರವಾಗಿ ಮಾರಾಟ ಮಾಡಲು ಸಹಕಾರಿಯಾಗಿದೆ ಎಂದು ನಂದಗುಡಿ ಗ್ರಾಪಂ ಅಭಿವೃದ್ಧಿ ಅಧಿಕಾರಿ ಎಂ.ಕೆಂಪಣ್ಣ ಹೇಳಿದರು.
ಹೊಸಕೋಟೆ ತಾಲೂಕಿನ ನಂದಗುಡಿಯಲ್ಲಿ ಆಯೋಜಿಸಿದ್ದ ಕೌಶಲಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ ರಾಜ್ಯ ಗ್ರಾಮ ಜೀವನೋಪಾಯ ಸಂವರ್ಧನ ಸಂಸ್ಥೆ, ಜಿಪಂ, ತಾಪಂ, ನಂದಗುಡಿ ಗ್ರಾಪಂ ಹಾಗೂ ಮುತ್ಯಾಲಮ್ಮ ಸಂಜೀವಿನಿ ಗ್ರಾಪಂ ಮಟ್ಟದ ಒಕ್ಕೂಟ ಸ್ವಸಹಾಯ ಸಂಘದ ಆಶ್ರಯದಲ್ಲಿ ಸಂಜೀವಿನಿ ಸಂತೆ ನಡೆಯುವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಗ್ರಾಮೀಣ ಸ್ವಸಹಾಯ ಸಂಘಗಳ ಮಹಿಳೆಯರು ತಯಾರಿಸಿರುವ ಉತ್ಪನ್ನಗಳಿಗೆ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಿ ಆರ್ಥಿಕ ಪ್ರಗತಿಗೆ ಉತ್ತೇಜನ ನೀಡಲು ಮಾಸಿಕ ಸಂತೆ ಆಯೋಜಿಸಲಾಗಿದೆ. ಆಹಾರ ಉತ್ಪನ್ನ ಹಾಗೂ ಹಬ್ಬಕ್ಕೆ ಬೇಕಾಗುವ ಪರಿಸರ ಸ್ನೇಹಿ ವಸ್ತುಗಳನ್ನು ಕಡಿಮೆ ದರದಲ್ಲಿ ಮಾರಾಟ ಮಾಡಲಾಗುತ್ತಿದೆ. ಈ ವಸ್ತುಗಳನ್ನು ಸ್ವ&ಸಹಾಯ ಸಂಘಗಳ ಮಹಿಳೆಯರು ತಯಾರಿಸಿದ್ದಾರೆ. ಜನರು ಇದಕ್ಕೆ ಪ್ರೋತ್ಸಾಹಿಸಬೇಕು ಎಂದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net