ಬೇಸಿಗೆ ಅವಧಿಯಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜಿನಲ್ಲಿ ಯಾವ ಲೋಪಗಳು ಉಂಟಾಗಬಾರದೆಂಬ ಮುನ್ನೆಚ್ಚರಿಕೆ ಕ್ರಮವಾಗಿ ವಿಕಾಸಸೌಧದಲ್ಲಿ ಎಲ್ಲ ಜಿಪಂಗಳ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಪರೆನ್ಸ್‌ನಲ್ಲಿ ಸಚಿವರು ಸಭೆ ನಡೆಸಿದರು. ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಆಗದಂತೆ ಕ್ರಮವಹಿಸಬೇಕು. ಬೇಸಿಗೆ ಎದುರಿಸಲು ಜಿಲ್ಲೆಗಳಿಗೆ ವಿಶೇಷ ಅನುದಾನ ನೀಡಲಾಗಿದ್ದು, ಯಾವುದೇ ಲೋಪವಾಗದಂತೆ ಕ್ರಮ ಕೈಗೊಳ್ಳಬೇಕೆಂದು ತಾಕೀತು ಮಾಡಿದರು.