ಫಲಿತಾಂಶವನ್ನು ಮಂಡಳಿ ವೆಬ್‌ಸೈಟ್ http://karresults.nic.in ನಲ್ಲಿ ಹಾಗೂ ಕರ್ನಾಟಕ ಒನ್ ಮೊಬೈಲ್ ಆೃಪ್ ಮೂಲಕವೂ ಪ್ರಕಟಿಸಲಾಗುತ್ತದೆ.
ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್ ಸಂಖ್ಯೆಗೆ ವಾಟ್ಸ್‌ಆೃಪ್/ಎಸ್‌ಎಂಎಸ್ ಮೂಲಕವೂ ಫಲಿತಾಂಶದ ಮಾಹಿತಿಯನ್ನು ಮಂಡಳಿಯು ರವಾನಿಸಲಿದೆ.
ಇದೇ ಮೊದಲ ಬಾರಿಗೆ ವಿಶೇಷವಾಗಿ ವಿದ್ಯಾರ್ಥಿಗಳ ಫಲಿತಾಂಶದ ಅಂಕಪಟ್ಟಿಯನ್ನು ಡಿಜಿಲಾಕರ್‌ನಲ್ಲಿ ಏ.9ರಂದು ಮಧ್ಯಾಹ್ನ ಮೂರು ಗಂಟೆಗೆ ಫಲಿತಾಂಶ ಪ್ರಕಟವಾದ ಕೂಡಲೇ ಲಭ್ಯವಾಗಲಿದೆ
ಬೆಂಗಳೂರು
ರಾಜ್ಯಾದ್ಯಂತ ಫೆ.28ರಿಂದ ಮಾ.17ರವರೆಗೆ ನಡೆದ 2025-26ನೇ ಸಾಲಿನ ದ್ವಿತೀಯ ಪಿಯಸಿ ಪರೀಕ್ಷೆ-1ರ ಫಲಿತಾಂಶವನ್ನು ಕರ್ನಾಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಗುರುವಾರ (ಏ.9) ಮಧ್ಯಾಹ್ನ 3 ಗಂಟೆಗೆ ಪ್ರಕಟಿಸಲಿದೆ.
ನಲ್ಲಿ ಹಾಗೂ ಕರ್ನಾಟಕ ಒನ್ ಮೊಬೈಲ್ ಆೃಪ್ ಮೂಲಕವೂ ಪ್ರಕಟಿಸಲಾಗುತ್ತದೆ. ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್ ಸಂಖ್ಯೆಗೆ ವಾಟ್ಸ್‌ಆೃಪ್/ಎಸ್‌ಎಂಎಸ್ ಮೂಲಕವೂ ಫಲಿತಾಂಶದ ಮಾಹಿತಿಯನ್ನು ಮಂಡಳಿಯು ರವಾನಿಸಲಿದೆ.
ಫಲಿತಾಂಶದ ಪಟ್ಟಿಯನ್ನು ಸಂಬಂಧಿತ ಕಾಲೇಜುಗಳಿಗೆ ಏ.9ರಂದು ಮಧ್ಯಾಹ್ನ 3 ಗಂಟೆಗೆ ಕಾಲೇಜುಗಳ ಲಾಗಿನ್‌ಗೆ ಕಳುಹಿಸಲಾಗುತ್ತದೆ. ಈ ಮಾಹಿತಿಯನ್ನು ವಿದ್ಯಾರ್ಥಿಗಳಿಗೆ ತಿಳಿಸುವಂತೆ ಎಂದು ಮಂಡಳಿ ಅಧ್ಯಕ್ಷ ಪ್ರಕಾಶ್ ನಿಟ್ಟಾಲಿ ತಿಳಿಸಿದ್ದಾರೆ.
ಡಿಜಿಲಾಕರ್‌ನಲ್ಲಿ ಅಂಕಪಟ್ಟಿ
ಇದೇ ಮೊದಲ ಬಾರಿಗೆ ವಿಶೇಷವಾಗಿ ವಿದ್ಯಾರ್ಥಿಗಳ ಫಲಿತಾಂಶದ ಅಂಕಪಟ್ಟಿಯನ್ನು ಡಿಜಿಲಾಕರ್‌ನಲ್ಲಿ ಏ.9ರಂದು ಮಧ್ಯಾಹ್ನ ಮೂರು ಗಂಟೆಗೆ ಫಲಿತಾಂಶ ಪ್ರಕಟವಾದ ಕೂಡಲೇ ಲಭ್ಯವಾಗಲಿದೆ. https://www.digilocker;gov.in
ಅನ್ನು ಬಳಸಿ ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿಯನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು ಎಂದು ಮಂಡಳಿ ಅಧ್ಯಕ್ಷರು ತಿಳಿಸಿದ್ದಾರೆ.