ದ್ವಿತೀಯ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳಿಗೆ ಪ್ರತಿದಿನ ಎರಡು ಅವಧಿಗೆ ನಡೆಯುತ್ತಿದ್ದ ಆನ್‌ಲೈನ್ ಲೈವ್ ತರಗತಿಗಳನ್ನು ತಾತ್ಕಾಲಿಕವಾಗಿ ಸ್ಥಗಿತ
ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪೂರ್ವಸಿದ್ಥತಾ ಪರೀಕ್ಷೆಗಳು ಹಾಗೂ ಪ್ರಾಯೋಗಿಕ ಪರೀಕ್ಷೆಗಳು ನಡೆಯುವ ಹಿನ್ನೆಲೆಯಲ್ಲಿ ಸ್ಥಗಿತ
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ನಂತರ ಹಾಗೂ ಸಿಇಟಿ ಪರೀಕ್ಷೆಯ ನಡುವಿನ ದಿನಗಳಲ್ಲಿ ಆನ್‌ಲೈನ್ ತರಗತಿಗಳನ್ನು ಮತ್ತೆ ಆರಂಭ
ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪೂರ್ವಸಿದ್ಥತಾ ಪರೀಕ್ಷೆಗಳು ಹಾಗೂ ಪ್ರಾಯೋಗಿಕ ಪರೀಕ್ಷೆಗಳು ನಡೆಯುವ ಹಿನ್ನೆಲೆಯಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳಿಗೆ ಪ್ರತಿದಿನ ಎರಡು ಅವಧಿಗೆ ನಡೆಯುತ್ತಿದ್ದ ಆನ್‌ಲೈನ್ ಲೈವ್ ತರಗತಿಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ನಂತರ ಹಾಗೂ ಸಿಇಟಿ ಪರೀಕ್ಷೆಯ ನಡುವಿನ ದಿನಗಳಲ್ಲಿ ಆನ್‌ಲೈನ್ ತರಗತಿಗಳನ್ನು ಮತ್ತೆ ಆರಂಭಿಸಲಾಗುವುದು ಎಂದು ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶಕರು ವಿಜ್ಞಾನ ಸಂಯೋಜನೆ ಹೊಂದಿರುವ ಕಾಲೇಜುಗಳು ಪ್ರಾಂಶುಪಾಲರಿಗೆ ಈ ಸೂಚನೆ ನೀಡಿದ್ದಾರೆ.
ಪ್ರಥಮ ಪಿಯುಸಿ ತರಗತಿಗಳಿಗೆ ಪ್ರತಿದಿನ ನಿಗದಿತ ವೇಳಾಪಟ್ಟಿಯಂತೆ ಆನ್‌ಲೈನ್ ತರಗತಿ ನಡೆಯಲಿದೆ. ಆದ್ದರಿಂದ ಪ್ರಥಮ ಪಿಯು ಪರೀಕ್ಷೆ ಆರಂಭವಾಗುವ ತನಕ ಪ್ರತಿದಿನ ಪ್ರಥಮ ಪಿಯುಸಿ ತರಗತಿ ನಡೆಸಬೇಕು. ತರಗತಿ ನಡೆಸುತ್ತಿರುವ ಬಗ್ಗೆ ಜಿಲ್ಲಾ ಉಪ ನಿರ್ದೇಶಕರು ಮೇಲ್ವಿಚಾರಣೆ ನಡೆಸಬೇಕು ಎಂದು ತಿಳಿಸಿದ್ದಾರೆ.