ಕಲಬುರಗಿ: ಭಾರತ ಜನಗಣತಿ&2027ರ ಸಿದ್ಧತೆ ಭಾಗವಾಗಿ ರಾಜ್ಯದಲ್ಲಿ ಜನಗಣತಿ ಕಾರ್ಯಕ್ಕೆ ಪೂರ್ವಸಿದ್ದತೆ ಹಂತ, ಹಂತವಾಗಿ ಕೈಗೊಳ್ಳಲಾಗುತ್ತಿದ್ದು, ಮೊದಲ ಹಂತವಾಗಿ ಮನೆಪಟ್ಟಿ ಮತ್ತು ಗೃಹ ಗಣತಿ ಕಾರ್ಯ ಏಪ್ರಿಲ್ 16 ರಿಂದ ಮೇ 15ರವರೆಗೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ತಿಳಿಸಿದ್ದಾರೆ.