ಬೆಟ್ಟದಪುರ: ಇಲ್ಲಿನ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಕುರಿತು ಶುಕ್ರವಾರ ವಿಶೇಷ ಸಭೆ ಆಯೋಜಿಸಲಾಗಿತ್ತು.
ಗ್ಯಾರಂಟಿ ಯೋಜಬೆಗಳ ಅನುಷ್ಠಾನ ಪ್ರಾಧಿಕಾರದ ಸದಸ್ಯ ಬಿ.ವಿ.ರವಿ ಮಾತನಾಡಿ, ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಮಹತ್ವದ ಕೊಡುಗೆ ನೀಡಿದ್ದು, ಕುಟುಂಬದ ಯಜಮಾನಿಯರಿಗೆ ಮಾಸಿಕ ಆರ್ಥಿಕ ನೆರವು ನೀಡುವ ಮೂಲಕ ಸ್ವಾವಲಂಬನೆ ಸಾಧಿಸಲು ನೆರವಾಗಿದೆ. ಪಂಚ ಗ್ಯಾರಂಟಿ ಯೋಜನೆಗಳು ಬಡ ಮತ್ತು ಮಧ್ಯಮ ವರ್ಗದ ಜನರ ಬದುಕಿನಲ್ಲಿ ಸಕಾರಾತ್ಮಕ ಬದಲಾವಣೆ ತಂದಿದ್ದು, ಪ್ರತಿಯೊಬ್ಬ ಫಲಾನುಭವಿಯೂ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.
ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಚ್.ಡಿ.ಮಂಜುನಾಥ್, ಕಾರ್ಯದರ್ಶಿ ಎ.ಪಿ.ಪಾಂಡು, ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಕೆ.ಎಲ್.ಶ್ರೀನಿಧಿ, ಗ್ರಾಮ ಲೆಕ್ಕಾಧಿಕಾರಿ ನಿರಂಜನ್, ಶಾಲಾ ಶಿಕ್ಷಕರಾದ ಶಿವಕುಮಾರಿ, ಮಾನಸಾ, ಜ್ಯೋತಿ ಇತರರಿದ್ದರು.