ವಿಚಾರಗೋಷ್ಠಿಗಳು ಸಮಾಜದ ಬದಲಾವಣೆಗೆ ಪೂರಕ

Seminars contribute to social change
Seminars contribute to social change
Published on
ಶಿರಾ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಮಹಿಳೆಯರ ಸಬಲೀಕರಣಕ್ಕೆ ಪೂರಕವಾದ ವಿಚಾರಗೋಷ್ಠಿಗಳು ಸಮಾಜದಲ್ಲಿ ಉತ್ತಮ ಬದಲಾವಣೆ ತರಲಿವೆ ಎಂದು ಸಿದ್ದಾರೂಢ ಆಶ್ರಮದ ಶ್ರೀ ಚಿದಾನಂದ ಭಾರತಿ ಸ್ವಾಮೀಜಿ ತಿಳಿಸಿದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶಿರಾ ನಗರದ ಸಪ್ತಗಿರಿ ಬಡಾವಣೆಯ ಅಂಬೇಡ್ಕರ್​ ಭವನದಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿಯನ್ನು ಉದ್ಘಾಟಿಸಿ ಮಾತನಾಡಿದರು.
ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞೆ ಡಾ.ಎಸ್​.ಶಿಲ್ಪಶ್ರೀ ಮಾತನಾಡಿ, ಮಧ್ಯವಯಸ್ಕ ಮಹಿಳೆಯರಲ್ಲಿ ಕಂಡುಬರುವ ಆರೋಗ್ಯ ಸಮಸ್ಯೆಗಳು, ಮಹಿಳೆಯರಲ್ಲಿ ಹೆಚ್ಚಾಗಿ ಕಂಡುಬರುವ ಕ್ಯಾನ್ಸರ್​ ಕಾಯಿಲೆಗಳು, ಅವುಗಳ ಲಕ್ಷಣಗಳು ಹಾಗೂ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಸಂವಾದಾತ್ಮಕವಾಗಿ ಮಾಹಿತಿ ನೀಡಿದರು.
ಜಿಲ್ಲಾ ಜನಜಾಗೃತಿ ಸಮಿತಿ ಸದಸ್ಯೆ ಶೋಭಾ ನಾಗರಾಜು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಪ್ರಾದೇಶಿಕ ನಿರ್ದೇಶಕ ಶ್ರೀ ಶೀನಪ್ಪ ಮಾತನಾಡಿ, ಜ್ಞಾನವಿಕಾಸ ಕಾರ್ಯಕ್ರಮ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿವಿಧ ಜನಪರ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು.
ಜ್ಞಾನವಿಕಾಸ ಪ್ರಾದೇಶಿಕ ಕಚೇರಿಯ ಯೋಜನಾಧಿಕಾರಿ ಸಂಗೀತಾ, ನಗರಸಭೆ ಸದಸ್ಯರಾದ ಉಮಾ ವಿಜಯ್​ ರಾಜ್​, ಪೂಜಾ ಪೆದ್ದರಾಜು, ಡಾ. ವಿನಯ್​ ಕುಮಾರ್​ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net