ಹಿರಿಯ ಕಾರ್ಮಿಕ ಮುಖಂಡ ಎಚ್.ವಿ.ಅನಂತ ಸುಬ್ಬರಾವ್(85) ಹೃದಯಾಘಾತದಿಂದ ನಿಧನ |Anantha Subbarao

ಎಚ್​.ವಿ.ಅನಂತ ಸುಬ್ಬರಾವ್
ಎಚ್​.ವಿ.ಅನಂತ ಸುಬ್ಬರಾವ್
Published on
ಬೆಂಗಳೂರು: ಹಿರಿಯ ಕಾರ್ಮಿಕ ಮುಖಂಡ ಮತ್ತು ಭಾರತ ಕಮ್ಯೂನಿಸ್ಟ್ ಪಕ್ಷದ ನಾಯಕರಾಗಿದ್ದ ಎಚ್​.ವಿ.ಅನಂತ ಸುಬ್ಬರಾವ್(85) ಅವರು ಹೃದಯಾಘಾತದಿಂದ ಇಂದು(ಜ. 28) ಸಂಜೆ ನಿಧನರಾಗಿದ್ದಾರೆ.
ಅನಂತ್ ಸುಬ್ಬರಾವ್ ಅವರಿಗೆ ಮಧ್ಯಾಹ್ನ ಹೃದಯಾಘಾತವಾಗಿದ್ದು, ತಕ್ಷಣ ಬೆಂಗಳೂರಿನ ವಿಜಯನಗರದಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಆದರೆ ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ.
ಭಾರತ ಕಮ್ಯುನಿಸ್ಟ್ ಪಕ್ಷದ ಹಿರಿಯ ನಾಯಕರಾಗಿದ್ದ ಅವರು, ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿಯ ಅಧ್ಯಕ್ಷರಾಗಿದ್ದರು. ರಾಜ್ಯದಲ್ಲಿ ಸುದೀರ್ಘ ನಾಲ್ಕು ದಶಕಗಳ ಕಾಲ ಕಾರ್ಮಿಕ ಮುಖಂಡರಾಗಿ ಅನೇಕ ಚಳವಳಿಗಳನ್ನು ಮುನ್ನಡೆಸಿದ್ದರು.
ಎಚ್‌.ವಿ. ಅನಂತ ಸುಬ್ಬರಾವ್ ನಿಧನಕ್ಕೆ ಎಕ್ಸ್​​​ನಲ್ಲಿ ಸಂತಾಪ ಸೂಚಿಸಿರುವ ಸಿಎಂ ಸಿದ್ದರಾಮಯ್ಯ, ಭಾರತ ಕಮ್ಯುನಿಸ್ಟ್ ಪಕ್ಷದ ಹಿರಿಯ ನಾಯಕ ಹಾಗೂ ಜನಪ್ರಿಯ ಕಾರ್ಮಿಕ ಮುಖಂಡರಾದ ಎಚ್‌.ವಿ. ಅನಂತ ಸುಬ್ಬರಾವ್ ಅವರು ನಿಧನರಾದ ಸುದ್ದಿ ತಿಳಿದು ದುಃಖವಾಯಿತು.
ಸುದೀರ್ಘ ನಾಲ್ಕು ದಶಕಗಳ ಕಾಲ ಕಾರ್ಮಿಕ ಮುಖಂಡರಾಗಿ ಅನೇಕ ಚಳವಳಿಗಳನ್ನು ಮುನ್ನಡೆಸಿದ್ದ ಹೋರಾಟಗಾರ ಅನಂತ ಸುಬ್ಬರಾವ್ ನನಗೂ ಆತ್ಮೀಯರಾಗಿದ್ದರು. ಅವರ ದಣಿವರಿಯದ ಹೋರಾಟದ ಛಲ ಮತ್ತು ಸೈದ್ಧಾಂತಿಕ‌ ಬದ್ಧತೆ ಹೋರಾಟಗಾರರಿಗೆ ಒಂದು ಮಾದರಿ. ಅವರ ನಿರ್ಗಮನದಿಂದ ಸಮಾಜಕ್ಕೆ, ಮುಖ್ಯವಾಗಿ ಕಾರ್ಮಿಕ ವರ್ಗಕ್ಕೆ ತುಂಬಲಾರದ ನಷ್ಟವಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಲಭಿಸಲಿ, ಅವರ ಕುಟುಂಬವರ್ಗಕ್ಕೆ ನೋವು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net