ಹೈದರಾಬಾದ್ ಕರ್ನಾಟಕ ಹೊರತುಪಡಿಸಿ 3395 ಹುದ್ದೆ ಮತ್ತು ಹೈದರಾಬಾದ್ ಕರ್ನಾಟಕಕ್ಕೆ 596 ಕಾನ್‌ಸ್ಟೆಬಲ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಜೂನ್ 10ರಿಂದ ಜುಲೈ 3ರವರೆಗೆ ಕೆಇಎ ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಆದರೆ, ವೆಬ್‌ಸೈಟ್‌ನಲ್ಲಿ ಹಲವಾರು ಸಮಸ್ಯೆ ಎದುರಾಗಿದ್ದು, ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತಿಲ್ಲ. ಕೆಇಎ ಸರ್ವರ್‌ನಲ್ಲಿ ಲಾಗಿನ್ ಸಮಸ್ಯೆ ಎದುರಾಗಿದ್ದು, ಹುಟ್ಟಿದ ದಿನಾಂಕಕ್ಕೂ ಮತ್ತು ಆಧಾರ್ ಕಾರ್ಡ್‌ಗೂ ಹೊಂದಾಣಿಕೆಯಾಗುತ್ತಿಲ್ಲ.