ಪ್ರವಚನಕಾರ ತಳಗವಾರ ಆನಂದ್ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಮಾನವನು ಆಧುನಿಕ ಶೈಲಿಯ ಜೀವನ ಪದ್ಧತಿಗೆ ಒಗ್ಗಿಕೊಳ್ಳುತ್ತಿರುವುದರಿಂದ ಮಾನಸಿಕ ಒತ್ತಡ, ಖಿನ್ನತೆಯಂತಹ ಹಲವಾರು ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದಾನೆ. ಎಷ್ಟೇ ಕೆಲಸದ ಒತ್ತಡವಿದ್ದರೂ ಯೋಗ, ವ್ಯಾಯಾಮ ಹಾಗೂ ಧ್ಯಾನಕ್ಕೆ ಸಮಯ ಮೀಸಲಿಡಬೇಕು ಎಂದರು.