

ಬಂಗಾರಪೇಟೆ:
ಕೆಜಿಎಫ್ ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದ ಮನೆಗಳು ಹಾಗೂ ದೇವಸ್ಥಾನ ಕಳವು ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು 7 ಮಂದಿ ಆರೋಪಿಗಳನ್ನು ಕೋಲಾರ ಪೊಲೀಸರು ಬಂಧಿಸಿ, 306.780 ಗ್ರಾಂ ಚಿನ್ನಾಭರಣ, 975 ಗ್ರಾಂ ಬೆಳ್ಳಿ ವಸ್ತುಗಳು ಹಾಗೂ ಎರಡು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.
ಕಾಮಸಮುದ್ರದಲ್ಲಿ ಮತ್ತೊಬ್ಬ ಆರೋಪಿ ಬಂಧನ
ಕಾಮಸಮುದ್ರ ಪೊಲೀಸ್ ಠಾಣೆ ವ್ಯಾಪ್ತಿಯ ಯರಗೋಳ ಗ್ರಾಮದ ವೆಂಕುಬಾಯಿ ಮನೆಯಲ್ಲಿ ಸುಮಾರು 24 ಗ್ರಾಂ ತೂಕದ ಚಿನ್ನದ ಸರ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಅದೇ ಗ್ರಾಮದ ಉಪೇಂದ್ರರಾವ್ (28) ಎಂಬಾತನನ್ನು ಬಂಧಿಸಲಾಗಿದ್ದು, ಕಳವು ಮಾಡಿದ ಚಿನ್ನದ ಸರವನ್ನು ಮಾರಾಟ ಮಾಡಿರುವುದು ತನಿಖೆಯಿಂದ ತಿಳಿದುಬಂದಿದ್ದು, ವಶಪಡಿಸಿಕೊಳ್ಳುವ ಪ್ರಕ್ರಿಯೆ ಮುಂದುವರಿದಿದೆ ಎಂದು ತಿಳಿಸಿದ್ದಾರೆ.