ದುಮ್ಮಿ ಗ್ರಾಮದಲ್ಲಿ ವೈಜ್ಞಾನಿಕ ರೀತಿಯಲ್ಲಿ ಚರಂಡಿ ನಿರ್ಮಿಸದ ಕಾರಣ ಕೊಳಚೆ ನೀರು ರಸ್ತೆ ಮೇಲೆಯೇ ಹರಿಯುತ್ತಿದ್ದು, ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ. ಪ್ರತಿ ನಿತ್ಯ ಜಾನುವಾರುಗಳ ಸ್ನಾನ, ಕೊಟ್ಟಿಗೆಗಳ ಸ್ವಚ್ಛತೆ ಹಾಗೂ ಮನೆ ಬಳಕೆಯ ಕೊಳಚೆ ನೀರು ಚರಂಡಿಗೆ ಹರಿದರೂ, ಸಮರ್ಪಕ ವ್ಯವಸ್ಥೆ ಇಲ್ಲದ ಕಾರಣ ನೀರು ರಸ್ತೆಯಲ್ಲೇ ನಿಲ್ಲುತ್ತಿದೆ. ಇದರಿಂದ ದುರ್ವಾಸನೆ ಉಂಟಾಗುವ ಜತೆಗೆ ಸಾಂಕ್ರಾಮಿಕ ರೋಗಗಳು ಹರಡುವ ಆತಂಕವೂ ಎದುರಾಗಿದೆ. ಗ್ರಾಮದಲ್ಲಿ ವೈಜ್ಞಾನಿಕ ರೀತಿಯಲ್ಲಿ ಸುಸಜ್ಜಿತ ಚರಂಡಿ ನಿರ್ಮಿಸಿ, ಕೊಳಚೆ ನೀರು ಸರಾಗವಾಗಿ ಹರಿಯುವಂತೆ ಸಂಬಂಧಪಟ್ಟ ಅಧಿಕಾರಿಗಳು ಶೀಘ್ರ ಕ್ರಮ ಕೈಗೊಳ್ಳಬೇಕು.