ತಪಾಸಣೆಯ ವೇಳೆ ಬಯಲಾದ ನ್ಯೂನತೆಗಳು ನಿಜಕ್ಕೂ ಆತಂಕಕಾರಿಯಾಗಿದೆ. ಸಮೋಸಾಗಳನ್ನು ಕಾರ್ಡ್ ಬೋರ್ಡ್ ಬಾಕ್ಸ್‌ಗಳಲ್ಲಿ ಸಂಗ್ರಹಿಸುವುದು, ವಡೆಗಳನ್ನು ವಾರ್ತಾಪತ್ರಿಕೆಗಳ ಮೇಲೆ ಇಡುವುದು, ಆಹಾರವನ್ನು ಪತ್ರಿಕೆಗಳಲ್ಲಿ ಪ್ಯಾಕ್ ಮಾಡಿ ಕೊಡುವುದು ಮತ್ತು ಆಹಾರ ಪದಾರ್ಥಗಳನ್ನು ಸಂಗ್ರಹಿಸಲು ಸೂಕ್ತವಲ್ಲದ ಪ್ಲಾಸ್ಟಿಕ್ ಬಕೆಟ್‌ಗಳನ್ನು ಬಳಸುತ್ತಿರುವುದು ಪತ್ತೆಯಾಗಿದೆ. ಇಷ್ಟೇ ಅಲ್ಲದೆ, ಹಾವೇರಿ ಜಿಲ್ಲೆಯ ರೈಲ್ವೆ ನಿಲ್ದಾಣವೊಂದರಲ್ಲಿ ಅವಧಿ ಮೀರಿದ ಹಾಲು ಮತ್ತು ಮೊಸರಿನ ಪ್ಯಾಕೆಟ್‌ಗಳು ದೊರೆತಿದ್ದರೆ, ಮೈಸೂರಿನಲ್ಲಿ ಪ್ಲಾಸ್ಟಿಕ್ ಬಳಸಿ ಇಡ್ಲಿ ತಯಾರಿಸುತ್ತಿದ್ದ ಘಟನೆ ಬೆಳಕಿಗೆ ಬಂದಿದೆ.