ಶ್ರೀ ಛತ್ರಪತಿ ಶಿವಾಜಿ ಮಹಾರಾಜ ಜಯಂತಿ ಆಚರಣೆ

 Shri Chhatrapati Shivaji Maharaja
Shri Chhatrapati Shivaji Maharaja
Published on

ಪ್ರಮುಖ ಮುಖ್ಯಾಂಶಗಳು

  • ಫೆಬ್ರವರಿ 19ರಂದು
ಕಲಬುರಗಿ : ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಮಹಾನಗರಪಾಲಿಕೆ ಹಾಗೂ ಜಿಲ್ಲಾ ಪಂಚಾಯತ್ ಇವುಗಳ ಸಂಯುಕ್ತಾಶ್ರಯದಲ್ಲಿ ಶ್ರೀ ಛತ್ರಪತಿ ಶಿವಾಜಿ ಮಹಾರಾಜ ಜಯಂತಿ ಆಚರಣೆ ಕಾರ್ಯಕ್ರಮವನ್ನು ಫೆಬ್ರವರಿ 19 ರಂದು ಗುರುವಾರ ಮಧ್ಯಾಹ್ನ 1 ಗಂಟೆಗೆ ಕಲಬುರಗಿ ನಗರದ ಡಾ.ಎಸ್.ಎಂ.ಪಂಡಿತ ರಂಗಮಂದಿರದಲ್ಲಿ ಏರ್ಪಡಿಸಲಾಗಿದೆ.
ರಾಜ್ಯಸಭೆಯ ವಿರೋಧ ಪಕ್ಷದ ನಾಯಕರು ಹಾಗೂ ರಾಜ್ಯಸಭಾ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ ಅವರು ಘನ ಉಪಸ್ಥಿತಿ ವಹಿಸುವರು. ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು.
ರಾಜ್ಯದ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಖಾತೆ ಸಚಿವರಾದ ಡಾ. ಶರಣಪ್ರಕಾಶ ಪಾಟೀಲ, ಆಳಂದ ಶಾಸಕ ಹಾಗೂ ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷರಾದ ಬಿ.ಆರ್. ಪಾಟೀಲ, ಕರ್ನಾಟಕ ರೇಷ್ಮೆ ಉದ್ದಿಮೆಗಳ ನಿಗಮದ ನಿಯಮಿತದ ಅಧ್ಯಕ್ಷೆ ಹಾಗೂ ಉತ್ತರ ಶಾಸಕಿ ಕನೀಜ್ ಫಾತೀಮಾ, ಜೇವರ್ಗಿ ಶಾಸಕ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಡಾ. ಅಜಯಸಿಂಗ್ ಅವರು ಗೌರವ ಉಪಸ್ಥಿತಿವಹಿಸುವರು. ಕಲಬುರಗಿ ದಕ್ಷಿಣ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಕಾರ್ಯಕ್ರಮದ ಅಧ್ಯಕ್ಷತೆವಹಿಸುವರು.
ಕಲಬುರಗಿ ಲೋಕಸಭಾ ಸದಸ್ಯ ರಾಧಾಕೃಷ್ಣ ದೊಡ್ಡಮನಿ, ಬೀದರ ಲೋಕಸಭಾ ಸದಸ್ಯ ಸಾಗರ ಖಂಡ್ರೆ, ಶಾಸಕರುಗಳಾದ ಎಂ.ವೈ. ಪಾಟೀಲ, ಬಸವರಾಜ ಮತ್ತಿಮಡು, ಡಾ. ಅವಿನಾಶ ಜಾಧವ, ವಿಧಾನ ಪರಿಷತ್ ಶಾಸಕರುಗಳಾದ ಶಶೀಲ ಜಿ. ನಮೋಶಿ, ಡಾ. ಬಿ.ಜಿ.ಪಾಟೀಲ, ಡಾ. ಚಂದ್ರಶೇಖರ ಪಾಟೀಲ ಹುಮನಾಬಾದ, ತಿಮ್ಮಣ್ಣಪ್ಪ ಕಮಕನೂರ, ಸುನೀಲ್ ವಲ್ಲ್ಯಾಪುರೆ, ಡಾ. ತಳವಾರ ಸಾಬಣ್ಣ, ಜಗದೇವ ಗುತ್ತೇದಾರ್, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಅಧ್ಯಕ್ಷ ದೇವಿಂದ್ರಪ್ಪ ಮರತೂರ, ಕರ್ನಾಟಕ ರಾಜ್ಯ ವಕ್ಪ್ ಮಂಡಳಿಯ ಅಧ್ಯಕ್ಷ ಸೈಯದ್ ಮುಹಮ್ಮದ್ ಅಲಿ ಅಲ್ ಹುಸೇನಿ, ಅಚ್ಚುಕಟ್ಟು ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಅಬ್ದುಲ್ ರಶೀದ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಅರುಣಕುಮಾರ್ ಎಂ.ವೈ. ಪಾಟೀಲ, ಜೆಸ್ಕಾಂ ಅಧ್ಯಕ್ಷ ಪ್ರವೀಣ ಪಾಟೀಲ ಹರವಾಳ, ಕರ್ನಾಟಕ ರಾಜ್ಯ ದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಸೈಯ್ಯದ್ ಮಹೆಬೂಬ್ ಚಿಸ್ತಿ ಸಾಹೇಬ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷೆ ಚಂದ್ರಿಕಾ ಪರಮೇಶ್ವರ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜಹರ್ ಆಲಂ ಖಾನ್ ಹಾಗೂ ಮಹಾನಗರಪಾಲಿಕೆ ಮಹಾಪೌರ ವರ್ಷಾ ರಾಜೀವ ಜಾನೆ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತೆ ಜಹೀರಾ ನಸೀಮ್, ಕಲಬುರಗಿ ಈಶಾನ್ಯ ವಲಯದ ಪೊಲೀಸ್ ಉಪ ಮಹಾನಿರೀಕ್ಷಕ ಶಾಂತನು ಸಿನ್ಹಾ, ಜೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಕೃಷ್ಣ ಭಾಜಪೇಯಿ, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ನಲಿನ್ ಅತುಲ್, ಕೆ.ಕೆ.ಆರ್.ಟಿ.ಸಿ. ವ್ಯವಸ್ಥಾಪಕ ನಿರ್ದೇಶಕಿ ಡಾ. ಬಿ. ಸುಶೀಲಾ, ಕಲಬುರಗಿ ವಿಭಾಗದ ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತ ಪಾಂಡ್ವೆ ರಾಹುಲ್ ತುಕಾರಾಮ್, ಕರ್ನಾಟಕ ಕ್ಷತ್ರೀಯ ಮರಾಠಾ ಪರಿಷತ್ತು ಜಿಲ್ಲಾ ಅಧ್ಯಕ್ಷರಾದ ಆರ್.ಬಿ.ಜಗದಾಳೆ ಹಾಗೂ ಬೆಂಗಳೂರು ಕೆ.ಕೆ.ಎಮ್.ಪಿ. ರಾಜ್ಯ ಕಾನೂನು ಸಲಹೆಗಾರ ಸೂರ್ಯಕಾಂತ ಕದಮ್ ಅವರು ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು.
ಕಾರ್ಯಕ್ರಮದಲ್ಲಿ ಮಹಾರಾಷ್ಟ್ರ ತಕೋಬಾರಾಯ ಸಾಹಿತ್ಯ ಪರಿಷತ್ತು ಸಂಘಟಕರಾದ ಸತೀಶ ಹಾನೇಗಾವ ಜಗದ್ಗುರು ಅವರು ವಿಶೇಷ ಉಪನ್ಯಾಸ ನೀಡುವರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net