ಮೋದಿ ಸರ್ಕಾರ ಡಿಸೆಂಬರ್ 17ರಂದು ಕಾಯ್ದೆಯನ್ನು ಸಂಸತ್ತಿನಲ್ಲಿ ಮಂಡಿಸಿ ಡಿ.18ರಂದು ಅಂಗೀಕಾರ ಪಡೆದಿದೆ. ಸುಮಾರು 12.16 ಕೋಟಿ ನರೇಗಾ ಕಾರ್ಮಿಕರು ದೇಶದಲ್ಲಿದ್ದಾರೆ. ಅದರಲ್ಲಿ 6.21 ಕೋಟಿ ಮಹಿಳೆಯರು ಇದ್ದಾರೆ. ಪ.ಜಾತಿಯವರು ಶೇ.17, ಪ.ವರ್ಗ ಶೇ. 11 ಇದ್ದಾರೆ.ನಮ್ಮ ರಾಜ್ಯದಲ್ಲಿ 71.18 ಲಕ್ಷ ನರೇಗಾ ಕಾರ್ಮಿಕರಿದ್ದಾರೆ. ಇದರಲ್ಲಿ 36.75 ಲಕ್ಷ ಮಹಿಳೆಯರು, ಅಂದರೆ ಶೇ. 51.6 ಮಹಿಳೆಯರಿದ್ದಾರೆ ಎಂದು ವಿವರಿಸಿದರು.