ಈ ಕುರಿತು ತಮ್ಮ ಟ್ವೀಟರ್ ಹ್ಯಾಂಡಲ್ನಲ್ಲಿ ಹಂಚಿಕೊಂಡಿರುವ ಸಿಎಂ, ಡಿ.ದೇವರಾಜ ಅರಸರು ಅವರು ಮುಖ್ಯಮಂತ್ರಿಗಳಾಗಿ ಏಳು ವರ್ಷ ಏಳು ತಿಂಗಳು ಇಪ್ಪತ್ತಮೂರು ದಿನಗಳ ಕಾಲ ಈ ರಾಜ್ಯದ ಜನರ ಸೇವೆ ಮಾಡಿದ್ದಾರೆ. ಅದಕ್ಕಿಂತಲೂ ಹೆಚ್ಚಿನ ಅವಧಿಗೆ ಮುಖ್ಯಮಂತ್ರಿಗಳಾಗಿ ಸೇವೆ ಸಲ್ಲಿಸುವ ಅವಕಾಶವನ್ನು ರಾಜ್ಯದ ಜನತೆ ನನಗೆ ನೀಡಿದ್ದಾರೆ. ಇದನ್ನೆಲ್ಲ ದಾಖಲೆಗಳ ದೃಷ್ಟಿಯಿಂದ ನಾನು ನೋಡುವುದಿಲ್ಲ, ಯಾರೂ ನೋಡಬಾರದು ಕೂಡಾ. ಇದು ಜನರ ಸೇವೆಗೆ ಸಿಕ್ಕಿರುವ ಅವಕಾಶದ ಭಾಗ್ಯ ಎಂದು ತಿಳಿದುಕೊಂಡಿದ್ದೇನೆ ಎಂದಿದ್ದಾರೆ.