ಸಿದ್ದರಾಮಯ್ಯನವರು ಕೇವಲ ಒಂದು ಸಮುದಾಯದ ನಾಯಕರಲ್ಲ, ಬದಲು ರಾಜ್ಯದ ಪ್ರತಿನಿಧಿಯಾಗಿದ್ದರು. ರಾಜ್ಯದ ಜನ ಅವರ ಆಡಳಿತದಿಂದ ಸಂತುಷ್ಟವಾಗಿದೆ. ಈ ಸಮಯದಲ್ಲಿ ಅವರನ್ನು ಅಧಿಕಾರದಿಂದ ಕೆಳಗೆ ಬನ್ನಿ ಎನ್ನುವುದು ಸರಿಯಲ್ಲ, ಕಾಂಗ್ರೆಸ್ ಹೈಕಮಾಂಡ್ ತನ್ನ ನಿರ್ಧಾರವನ್ನು ಹಿಂಪಡೆಯಬೇಕು. ಸಿದ್ದರಾಮಯ್ಯನವರೆ ಪೂರ್ಣಾವಧಿ ಸಿಎಂ ಆಗಿ ಮುಂದುವರೆಯಬೇಕೆಂದು ಕನಕ ಯುವ ಸೇನೆ, ಕುರುಬ ಯುವ ಸೇನೆ ಸೇರಿದಂತೆ ವಿವಿಧ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.