ಚಿಂತಾಮಣಿ: ನಗರದ ಚೌಡರೆಡ್ಡಿಪಾಳ್ಯದ ಎಸ್ಡಿಪಿಐ ಕಚೇರಿ ಬಳಿ ಕೋಲಾರ ಜಿಲ್ಲೆಯ ಬಂಗಾರಪೇಟೆ ಸಮೀಪ 6 ವರ್ಷದ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣವನ್ನು ಖಂಡಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಕಾರ್ಯಕರ್ತರು ಮೇಣದಬತ್ತಿ ಹಚ್ಚಿ ಮೌನ ಪ್ರತಿಭಟನೆ ನಡೆಸಿದರು.
ಎಸ್ಡಿಪಿಐ ಜಿಲ್ಲಾ ಅಧ್ಯಕ್ಷ ಅನ್ಸರ್ ಪಾಷಾ ಮಾತನಾಡಿ, ಮನೆ ಬಾಗಿಲಲ್ಲಿಯೇ ಸುರಕ್ಷತೆ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದ್ದರೆ ಹೆಣ್ಣುಮಕ್ಕಳಿಗೆ ಎಲ್ಲಿ ನ್ಯಾಯ ಸಿಗಲಿದೆ ಎಂದು ಪ್ರಶ್ನಿಸಿದರು.
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಮುಂದುವರಿಯುತ್ತಿವೆ. ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು. ಹೆಣ್ಣುಮಕ್ಕಳ ಸುರಕ್ಷತೆಗಾಗಿ ಕಾನೂನುಗಳನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.ಕೆಜೆಸಿ ಚಾಂದ್ ಪಾಷಾ, ಮುಸ್ತಫಾ, ಮಂಜೂರ್ ಪಾಷಾ ಇದ್ದರು.