ಟೌನ್‌ಶಿಪ್ ಕೈಬಿಡದಿದ್ದರೆ ವಿಧಾನಸೌಧದಲ್ಲೇ ಧರಣಿ

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Published on
ಬೆಂಗಳೂರು: ಬಿಡದಿ ಉಪನಗರ ಯೋಜನೆ ಕೈಬಿಡದೆ ಇದ್ದರೆ ವಿಧಾನಸೌಧದ ಗಾಂಧಿ ಪ್ರತಿಮೆ ಮಂಭಾಗ ಧರಣಿ ಕೂರುವುದಾಗಿ ಸರ್ಕಾರಕ್ಕೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಎಚ್ಚರಿಕೆ ನೀಡಿದ್ದಾರೆ.
ಟೌನ್‌ಶಿಪ್‌ಗೆ ಜಮೀನು ಕೊಡಲು ರೈತರು ನಿರಾಕರಿಸುತ್ತಿದ್ದಾರೆ. ಬಡರೈತರ ಹೊಟ್ಟೆಯ ಮೇಲೆ ಹೊಡೆಯಬೇಡಿ. ಹೈಕಮಾಂಡ್‌ಗೆ ಒಡ್ಡಿರುವ ಆಮಿಷಗಳನ್ನು ಈಡೇರಿಸಲು ಬೇರೆ ಬೇರೆ ದಾರಿಗಳಿವೆ. ದಯಮಾಡಿ ಈ ಯೋಜನೆಯನ್ನು ಇಲ್ಲಿಗೇ ಕೈಬಿಡಿ. ಒಂದು ವೇಳೆ ಯೋಜನೆಯನ್ನು ಕೈಬಿಡದಿದ್ದರೆ ವಿಧಾನಸೌಧದ ಪಕ್ಕದ ಗಾಂಧಿ ಪ್ರತಿಮೆ ಮುಂದೆ ಧರಣಿ ಕೂರುತ್ತೇನೆ. ಅಂತಹ ಪರಿಸ್ಥಿತಿಗೆ ನನ್ನನ್ನು ದೂಡಬೇಡಿ ಎಂದು ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.
ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗ ಯಾವ ಅಧಿಕಾರಿ ಕೂಡ ಸರ್ವೇ ಮಾಡುತ್ತೇವೆ ಎಂದು ಬಿಡದಿಗೆ ಹೋಗಲಿಲ್ಲ. ಹೊಸ ಸಿಎಂ ಬಂದು ಒಂದು ತಿಂಗಳಾಗಲಿಲ್ಲ, ಆಗಲೇ ಅಧಿಕಾರಿಗಳನ್ನು ಬಿಟ್ಟು ಸರ್ವೇ ಮಾಡಿಸಿ ಜಮೀನು ಕಿತ್ತುಕೊಳ್ಳಲು ಹೊರಟಿದ್ದಾರೆ. ಯಾವ ಕಾರಣದಿಂದ ಈ ಯೋಜನೆಗೆ ಕೈಹಾಕಿದ್ದೀರಿ ಎಂಬುದು ನನಗೆ ಗೊತ್ತಿದೆ ಎಂದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net