

ಭಾಲ್ಕಿ: ಛತ್ರಪತಿ ಶಿವಾಜಿ ಮಹಾರಾಜ್ ಚೌಕ್ ಬಳಿಯ ರೈಲ್ವೆ ಗೇಟ್ ಬಳಿ ಉಂಟಾಗುತ್ತಿರುವ ಸಂಚಾರ ದಟ್ಟಣೆ ಹಾಗೂ ಸಾರ್ವಜನಿಕರ ತೊಂದರೆಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಸಂಸದ ಸಾಗರ್ ಖಂಡ್ರೆ ರಾಷ್ಟ್ರೀಯ ಹೆದ್ದಾರಿ, ರೈಲ್ವೆ ಇಲಾಖೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಗುರುವಾರ ಪರಿಶೀಲನೆ ನಡೆಸಿದರು. ರೈಲ್ವೆ ಮೇಲ್ಸೇತುವೆ ನಿಮಾರ್ಣದ ಕುರಿತು ಅಧಿಕಾರಿಗಳೊಂದಿಗೆ ಸಮಗ್ರವಾಗಿ ಚರ್ಚಿಸಿ, ಯೋಜನೆಯ ಸಾಧ್ಯತೆಗಳು, ತಾಂತ್ರಿಕ ಅಂಶ ಹಾಗೂ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಮಾಹಿತಿ ಪಡೆದರು. ನಂತರ ತಾಲೂಕು ಪಂಚಾಯತ್ ಕಚೇರಿಯಲ್ಲಿ ಸಂಬಂಧಪಟ್ಟ ಯೋಜನಾ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಮೇಲ್ಸೇತುವೆ ನಿಮಾರ್ಣಕ್ಕೆ ಸಂಬಂಧಿಸಿದ ಯೋಜನೆಯ ಪ್ರಗತಿ ಹಾಗೂ ಅಗತ್ಯ ಕ್ರಮಗಳ ಕುರಿತು ವಿಸತ ಮಾಹಿತಿ ಪಡೆದು, ಕಾಮಗಾರಿ ಕೈಗೆತ್ತಿಕೊಳ್ಳಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ರಾಷ್ಟ್ರೀಯ ಹೆದ್ದಾರಿ, ರೈಲ್ವೆ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.