

ಪ್ರಮುಖ ಮುಖ್ಯಾಂಶಗಳು
ವಸತಿ ಶಾಲೆಯಲ್ಲಿ ಒಳ್ಳೆಯ ಸಂಸ್ಕಾರ, ಶಿಕ್ಷಣ ಸಿಗಲಿದೆ ಎಂಬ ಕನಸು ಕಟ್ಟಿಕೊಂಡು ಬಡವರು ವಸತಿ ಶಾಲೆಗಳಿಗೆ ಸೇರಿಸುತ್ತಾರೆ. ಆದರೆ, ಶಾಲೆಯಲ್ಲಿ ಸಿಗರೇಟ್ ಪೂರೈಕೆಯಾಗುತ್ತಿರುವುದು ನಿಜಕ್ಕೂ ಆತಂಕಕಾರಿ. ಈ ಕುರಿತು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ಗಮನಕ್ಕೂ ತರಲಾಗಿದೆ. ಆದರೂ ಸಕಾರಾತ್ಮಕ ಸ್ಪಂದನೆ ದೊರಕುತ್ತಿಲ್ಲ.
ವಸತಿ ಶಾಲೆಗಳು ಅವ್ಯವಸ್ಥೆಯ ಗೂಡಾಗಿವೆ. ಅಧಿಕಾರಿಗಳ ಬೇಜವಾಬ್ದಾರಿಗೆ ಮರಗೂರ ವಸತಿ ಶಾಲೆಯೇ ಸಾಕ್ಷಿ. ವಿಡಿಯೋ ದೃಶ್ಯಾವಳಿಗಳು ವಸತಿ ಶಾಲೆ ಚಿತ್ರಣವನ್ನು ಬಿಚ್ಚಿಡುತ್ತವೆ. ಈ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದರೂ ಸರಿಯಾಗಿ ಪ್ರತಿಕ್ರಿಯಿಸುತ್ತಿಲ್ಲ. ಮಕ್ಕಳನ್ನು ದೇವರೇ ಕಾಪಾಡಬೇಕು.