ಗ್ರಾಮದ ಪ್ರಗತಿಗೆ ಸಾಮಾಜಿಕ ಪರಿಶೋಧನೆ ಅವಶ್ಯ

Social audit is essential for village progress.
Social audit is essential for village progress.
Published on
ಗುಬ್ಬಿ: ಸರ್ಕಾರದ ಯೋಜನೆಗಳು ಮತ್ತು ಅನುದಾನಗಳು ಕಟ್ಟಕಡೆಯ ವ್ಯಕ್ತಿಗೂ ಪಾರದರ್ಶಕವಾಗಿ ತಲುಪುವಂತೆ ಮಾಡುವಲ್ಲಿ ಸಾಮಾಜಿಕ ಪರಿಶೋಧನೆಯು ಪ್ರಮುಖ ಪಾತ್ರ ವಹಿಸುತ್ತದೆ ಎಂದು ಮಾರ್ಗದರ್ಶಿ ಅಧಿಕಾರಿ ಇಸಿಒ ನಿಜಾನಂದಮೂರ್ತಿ ಹೇಳಿದರು.
ತಾಲೂಕು ಕಸಬಾ ಹೋಬಳಿ ಅಮ್ಮನಘಟ್ಟದಲ್ಲಿ ಆಯೋಜಿಸಿದ್ದ ಗ್ರಾಮಸಭೆಯಲ್ಲಿ ಮಾತನಾಡಿ, ಸಾರ್ವಜನಿಕರು ಗ್ರಾಮ ಸಭೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಕಾಮಗಾರಿಗಳ ಗುಣಮಟ್ಟದ ಬಗ್ಗೆ ಧ್ವನಿ ಎತ್ತಬೇಕು ಎಂದು ತಿಳಿಸಿದರು.
ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕ ಹೊನ್ನಪ್ಪ ಮಾತನಾಡಿ, ಗ್ರಾಪಂನಲ್ಲಿ ನಡೆಯುವ ಎಲ್ಲ ಕಾಮಗಾರಿಗಳನ್ನು ಪರಿಶೋಧನೆಗೆ ಒಳಪಡಿಸಿದಾಗ ಮಾತ್ರ ಕಾಮಗಾರಿ ಪೂರ್ಣಗೊಂಡಿದೆ, ಗುಣಮಟ್ಟದ್ದಾಗಿದೆ ಎಂಬುದನ್ನು ತಿಳಿಯಬಹುದು ಎಂದು ತಿಳಿಸಿದರು.
ನರೇಗಾ ಯೋಜನೆಯ ತಾಂತ್ರಿಕ ಸಹಾಯಕರು, ಆಶಾ ಕಾರ್ಯಕರ್ತರು, ಸ್ತ್ರೀ ಶಕ್ತಿ ಮಹಿಳಾ ಸ್ವ&ಸಹಾಯ ಸಂಘದವರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net